ಮುಂಡಾಜೆ ಪ.ಪೂ. ಕಾಲೇಜು: ಜಾಗೃತ ಜಾಗೃತಿ ಸಪ್ತಾಹ

Upayuktha
0


ಮುಂಡಾಜೆ: ಕೇಂದ್ರ ಜಾಗೃತ ಆಯೋಗದ ಭ್ರಷ್ಟಾಚಾರ ತಡೆಗಟ್ಟುವಿಕೆ ಮತ್ತು ವಿರುದ್ಧದ ಹೋರಾಟದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ 'ಜಾಗೃತ ಜಾಗೃತಿ ಸಪ್ತಾಹ'ವನ್ನು 30 ಅಕ್ಟೋಬರ್‌ನಿಂದ 5 ನವೆಂಬರ್, 2023 ರವರೆಗೆ "ಭ್ರಷ್ಟಾಚಾರಕ್ಕೆ ಬೇಡವೆನ್ನಿ; ರಾಷ್ಟ್ರಕ್ಕೆ ಬದ್ಧರಾಗಿರಿ" ಎನ್ನುವ ಧ್ಯೇಯ ವಾಕ್ಯದೊಂದಿಗೆ ದೇಶದಾದ್ಯಂತ ಆಚರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾಲೇಜಿನ ರೋವರ್ಸ್ ರೇಂಜರ್ಸ್ ವಿಭಾಗದ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಇತಿಹಾಸ ಉಪನ್ಯಾಸಕಿ ಶ್ರೀಮತಿ ಗೀತಾ ವಹಿಸಿ 'ಕಾಲೇಜು ವಿದ್ಯಾರ್ಥಿಗಳಲ್ಲಿ ಭ್ರಷ್ಟಾಚಾರದ ದುಷ್ಪರಿಣಾಮಗಳ ಅರಿವು ಮೂಡಿಸುವುದು, ಮಕ್ಕಳು ದೇಶದ ಭವಿಷ್ಯದ ಆಸ್ತಿಗಳು ಮತ್ತು ಅವರಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವುದು ಮುಖ್ಯ' ಎಂದರು.


ರೋವರ್ ಸ್ಕೌಟ್ ಲೀಡರ್ ಶ್ರೀ ಕೃಷ್ಣ ಕಿರಣ್ ಕೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು, ರೇಂಜರ್ ಲೀಡರ್ ಶ್ರೀಮತಿ ವಸಂತಿ ಪ್ರತಿಜ್ಞಾ ವಿಧಿ ಬೋಧಿಸಿದರು, ವಿದ್ಯಾರ್ಥಿನಿಯರಾದ ಕುಮಾರಿ ವಿಂಧ್ಯಾ ಸ್ವಾಗತಿಸಿ, ಕುಮಾರಿ ಅಂಜಲಿ ವಂದಿಸಿದರು.



ಸರ್ವ ಧರ್ಮ ಪ್ರಾರ್ಥನೆ

ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿಭಾಗದ ವತಿಯಿಂದ ಸರ್ವಧರ್ಮ ಪ್ರಾರ್ಥನೆಯನ್ನು ನಡೆಸಲಾಯಿತು. ಧಾರ್ಮಿಕ ಸೌಹಾರ್ದತೆಯನ್ನುಂಟು ಮಾಡುವ ಈ ಪ್ರಾರ್ಥನೆಯಲ್ಲಿ ಪ್ರಾಂಶುಪಾಲರಾದ ಜಾಲಿ ಡಿ'ಸೋಜಾ, ರೇಂಜರ್ ಲೀಡರ್ ಶ್ರೀಮತಿ ವಸಂತಿ, ರೋವರ್ ಸ್ಕೌಟ್ ಲೀಡರ್ ಶ್ರೀ ಕೃಷ್ಣ ಕಿರಣ್ ಕೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top