ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ಪ್ರಕೃತಿ ಚಿಕಿತ್ಸಾ ದಿನಾಚರಣೆ
ಮೂಡುಬಿದಿರೆ: ಇತರರಿಗೆ ಕಲಿಸುವ ಮೊದಲು ನಾವು ನಮ್ಮ ವ್ಯವಸ್ಥೆಯನ್ನು ಪ್ರೀತಿಸುವುದು ಮುಖ್ಯ ಎಂದು ಉಡುಪಿಯ ತೋನ್ಸೆ ಹೆಲ್ತ್ ಸೆಂಟರ್‌ನ ವೈದ್ಯಕೀಯ ಅಧಿಕಾರಿ ಡಾ. ಶ್ರುತ ಮಾನ್ಯ ಹೇಳಿದರು.
ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ ಯೋಗ ಸಭಾಂಗಣದಲ್ಲಿ ನಡೆದ ಪ್ರಕೃತಿ ಚಿಕಿತ್ಸಾ ದಿನಾಚರಣೆಯಲ್ಲಿ ‘ಸಮಗ್ರ ವಿಧಾನಕ್ಕಾಗಿ ಪ್ರಕೃತಿ ಚಿಕಿತ್ಸೆ’ ಧ್ಯೇಯ ಕುರಿತು ಅವರು ಶನಿವಾರ ಅವರು ಮಾತನಾಡಿದರು.
ಕೋವಿಡ್ ನಂತರದ ದಿನಗಳಲ್ಲಿ ಜನರು ತಮ್ಮ ಆರೋಗ್ಯದ ಬಗ್ಗೆ ಬಹಳ ಜಾಗೃತರಾಗಿದ್ದಾರೆ. ಸುತ್ತಮುತ್ತಲಿರುವ ವಿವಿಧ ರೀತಿಯ ಚಿಕಿತ್ಸೆಯನ್ನು ಕೇಳುವ ಮನೋಭಾವವಿದ್ದರೂ ಮನಸ್ಸಿಗೆ ತೋಚಿದಂತೆ ಚಿಕಿತ್ಸೆ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಚಿಕಿತ್ಸಾ ವಿಧಾನ ಆಯ್ಕೆ ಮಾಡಿಕೊಳ್ಳುವಾಗ ವೈಜ್ಞಾನಿಕ ಮನೋಭಾವ ಮುಖ್ಯ. ಇಂದಿನ ಯುವಜನತೆ ಸಾಮಾಜಿಕ ಜಾಲತಾಣಗಳಿಗೆ ನೀಡುವ ಆದ್ಯತೆಯನ್ನು ಆರೋಗ್ಯಕ್ಕೆ ನೀಡುತ್ತಿಲ್ಲ. ಆರೋಗ್ಯ ಪಾಲನೆಯಲ್ಲಿ ‘ಪಂಚತಂತ್ರ’ ಪಾಲನೆ ಅತ್ಯವಶ್ಯ’ ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ‘ಆರೋಗ್ಯದ ಕುರಿತು ಸ್ವಯಂ ಸಂಶೋಧನೆ ನಡೆಸಲು ಹೋಗಿ ತಪ್ಪು ದಾರಿ ಹಿಡಿಯುತ್ತಿದ್ದಾರೆ. ವೈಜ್ಞಾನಿಕ ಸಂಶೋಧನೆಗಳು ಅವಶ್ಯ. ಆಹಾರವು ಬಳಕೆಗಿಂತ ವ್ಯರ್ಥವೇ ಹೆಚ್ಚಾಗುತ್ತಿದೆ. ಉತ್ತಮ ಆಹಾರ ಸೇವನೆ ಜೊತೆ ಆಹಾರದ ಸದ್ಬಳಕೆಯೂ ಅವಶ್ಯ. ಆಹಾರ ವ್ಯರ್ಥಗೊಳಿಸುವುದನ್ನು ತಡೆಯುವಲ್ಲಿ ನಾವು ಮುಖ್ಯ ಪಾತ್ರ ವಹಿಸಬೇಕು ಎಂದರು.
ನೈಸರ್ಗಿಕ ಹಣ್ಣು ಹಂಪಲುಗಳ ಪಾನೀಯದ ಪ್ರಾತ್ಯಕ್ಷಿಕೆ ನಡೆಯಿತು. ಕಾಲೇಜಿನ ‘ನ್ಯೂಸ್ ಬುಲೆಟಿನ್’ ಬಿಡುಗಡೆ ಮಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ವನಿತಾ ಶೆಟ್ಟಿ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಕೆಸ್ಸಿಯಾ ಸಜಿ ಮತ್ತು ಅಕ್ಷತಾ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಪ್ರಾಧ್ಯಾಪಕರಾದ ಡಾ.ಶಾರದಾ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ