ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ಆಚರಿಸಲಾಗುತ್ತಿರುವ ಐಕ್ಯತಾ ಸಪ್ತಾಹದ ಭಾಗವಾಗಿ ಮಹಿಳಾ ದಿನವನ್ನು ಆಚರಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕನ್ನಡ ವಿಭಾಗದ ಸಹಾಯ ಪ್ರಾಧ್ಯಾಪಕಿ ಶ್ರೀಮತಿ ರತ್ನಮಾಲಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಮಹಿಳೆ ಎಂದೂ ಅಬಲೆಯಲ್ಲ ಕರುಣೆ, ತಾಳ್ಮೆ, ಕ್ರಿಯಾಶೀಲತೆ, ಸೃಜನಶೀಲತೆ ಮುಂತಾದ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡ ಸಬಲೆ. ಆದರೆ ಪುರುಷ ಪ್ರಧಾನ ಭಾರತೀಯ ಸಮಾಜದಲ್ಲಿ ಆಕೆಯನ್ನು ದ್ವಿತೀಯ ದರ್ಜೆಯಲ್ಲಿಟ್ಟು ರಾಜಕೀಯ, ಸಾಮಾಜಿಕ, ಆರ್ಥಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಆಕೆಯನ್ನು ಕಡೆಗಣಿಸಲಾಯಿತು. ಇದರಿಂದಾಗಿ ದೇಶದ ಪ್ರಗತಿಯಲ್ಲಿಯೂ ನಿರೀಕ್ಷಿತ ಯಶಸ್ಸು ಸಾಧಿಸಲಾಗಿಲ್ಲ. ಮಹಿಳೆಯನ್ನು ಸಬಲೀಕರಣಗೊಳಿಸಿ ಗೌರವಿಸಿದಾಗ ಮಾತ್ರ ರಾಷ್ಟ್ರೀಯ ಅಭಿವೃದ್ಧಿ ಸಾಧ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಪ್ರಸ್ತುತ ಭಾರತೀಯ ಸಮಾಜದಲ್ಲಿ ಶಿಕ್ಷಣ ವ್ಯವಸ್ಥೆಯಿಂದಾಗಿ ಬದಲಾವಣೆಯ ಕುರುಹುಗಳನ್ನ ಕಾಣುತ್ತಿದ್ದು ಬದಲಾವಣೆ ವೇಗವನ್ನು ಕಂಡುಗೊಳ್ಳಬೇಕಾಗಿದೆಯೆಂದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ರಾಧಾಕೃಷ್ಣ, ಶೈಕ್ಷಣಿಕ ಸಲಹೆಗಾರರಾದ ಡಾ. ಪ್ರಸಾದ್ ರಾವ್ ಎಂ., ಹಿಂದಿ ವಿಭಾಗ ಮಖ್ಯಸ್ಥೆಡಾ. ಆಶಾ ಸಿ. ಇಂಗಳಗಿ ಮತ್ತಿತರರು ಉಪಸ್ಥಿತರಿದ್ದರು. ಸ್ನಾತಕೋತ್ತರ ವಿದ್ಯಾರ್ಥಿಗಳಾದ ಅನಿಲ ಪೂಜಾರ, ನೈನಾ ಶೆಟ್ಟಿ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ಅರ್ಚನಾ ಅತಿಥಿಗಳನ್ನು ಸ್ವಾಗತಿಸಿದರೆ, ಐಕ್ಯೂಎಸಿ ಸಂಚಾಲಕಿ ಡಾ. ಮೇವಿ ಮಿರಾಂದ ವಂದಿಸಿದರು. ಕನ್ನಡ ವಿಭಾಗದ ಉಪನ್ಯಾಸಕಿ ಶ್ರೀಮತಿ ಶರಿತಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು. ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಬೋಧಕ/ಬೋಧಕೇತರ ವೃಂದದವರು ಕಾರ್ಯಕ್ರಮದಲ್ಲಿ ಭಾಗಿಯಾದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ