- ಪಾಂಚಜನ್ಯ ಪ್ರತಿಷ್ಠಾನದ ಹನ್ನೊಂದನೇ ವಾರ್ಷಿಕೋತ್ಸವ
- ಧಾರವಾಡದ ನಿವೃತ್ತ ಮುಖ್ಯೋಪಾಧ್ಯಾಯ ಸುರೇಶ್.ವಿ.ಕುಲಕರ್ಣಿ ರವರಿಗೆ 2023ನೇ ಸಾಲಿನ ಪ್ರತಿಷ್ಠಿತ ‘ಪಾಂಚಜನ್ಯ ಪುರಸ್ಕಾರ’ ಪ್ರದಾನ ಸಮಾರಂಭ.
ಬೆಂಗಳೂರು: ಬೆಂಗಳೂರು ಜಯನಗರ 4ನೇ ಬ್ಲಾಕ್‌ನ ಯುವಪಥ , ವಿವೇಕ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಧಾರವಾಡದ ನಿವೃತ್ತ ಮುಖ್ಯೋಪಾಧ್ಯಾಯ ಸುರೇಶ್.ವಿ.ಕುಲಕರ್ಣಿ ರವರಿಗೆ ಅವರಿಗೆ ಪ್ರಸ್ತುತ ವರ್ಷದ ಪಾಂಚಜನ್ಯ ಪುರಸ್ಕಾರವನ್ನು ನೀಡಿ ಪುರಸ್ಕರಿಸಲಾಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕುಲಕರ್ಣಿರವರು ಸಮಾಜ ಸುಧಾರಣೆಯಲ್ಲಿ ಶಿಕ್ಷಕನ ಪಾತ್ರ ಹೆಚ್ಚಿನ ಮಹತ್ವವನ್ನು ಹೊಂದಿದ್ದು ಇತರರಿಗೆ ಆದರ್ಶವಾಗಬೇಕು ಹಾಗು ತಮ್ಮ ಸೇವಾ ಮನೋಭಾವದಿಂದ ಜೀವನ ಸಾರ್ಥಕ ಗೊಳ್ಳುತ್ತದೆ ಎಂದು ತಿಳಿಸಿದರು.ಆರ್.ವಿ.ಶಿಕ್ಷಣ ಸಮೂಹದ ನಿರ್ದೇಶಕರು – ಯೋಜನೆ ಡಾ.ಟಿ.ವಿ.ರಾಜು ರವರು ಪ್ರಶಸ್ತಿ ಪ್ರದಾನ ಮಾಡಿದರು. ಬಿಹೆಚ್‌ಎಸ್ ಉನ್ನತ ಶಿಕ್ಷಣ ಸಂಸ್ಥೆ ಜಂಟಿ ಕಾರ್ಯದರ್ಶಿ ಡಾ.ಕೆ.ಎಸ್.ಸಮೀರ ಸಿಂಹ, ಮುಖ್ಯ ಅತಿಥಿಗಳಾಗಿ ವಿಶೇಷ ಆಹ್ವಾನಿತರಾಗಿ ಎಂಇಎಸ್ ಶಿಕ್ಷಣ ಸಮೂಹ ಶೈಕ್ಷಣಿಕ ನಿರ್ದೇಶಕರು ಡಾ.ಹೆಚ್.ಎಸ್.ಗಣೇಶ ಭಟ್ಟ ಪಾಲ್ಗೊಂಡ ಸಂವಾದದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರಿಗಿರಬೇಕಾದ ಮೌಲ್ಯಗಳನ್ನು ತಿಳಿಸಿದರು.ಅವರ ಮಾತುಗಳು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಜೀವನ ಪಾಠವಾಗಿತ್ತು. ದಕ್ಷಿಣ ಬೆಂಗಳೂರಿನಲ್ಲಿ ಪ್ರಶಿಕ್ಷಣಾರ್ಥಿ ಶಿಕ್ಷಕರಿಗೆ ಕೌಶಲ್ಯ ವರ್ಧಕ ಕಾರ್ಯಾಗಾರದಲ್ಲಿ (ಪೈಲಟ್ ಕಾರ್ಯಕ್ರಮ) - ನಾಲ್ಕು ಪ್ರತಿಷ್ಠಿತ ಕಾಲೇಜುಗಳ ಬಿಎಡ್ ವಿದ್ಯಾರ್ಥಿಗಳನ್ನು ಭಾಗವಹಿಸಿದ್ದರು.
ಸಮಾಜ ಸುಧಾರಕ ಶಿಕ್ಷಕ ಮತ್ತು ಇಂದಿನ ಶಿಕ್ಷಣ ವ್ಯವಸ್ಥೆಯ ಬಗ್ಗೆ .ಎನ್ ಎಂ ಕೆ ಆರ್ ವಿ ಕಾಲೇಜಿನ ಮುಖ್ಯಸ್ಥ ಡಾ.ಟಿ.ಎನ್.ಲೋಕೇಶ್ ಸಂವಾದ ನಡೆಸಿಕೊಟ್ಟರು
ನವೀನ ಬೋಧನಾ ವಿಧಾನಗಳಿಗಾಗಿ ಭವಿಷ್ಯದ ಶಿಕ್ಷಕರಲ್ಲಿ (ಬಿ.ಎಡ್ ವಿದ್ಯಾರ್ಥಿಗಳು) ಉತ್ಸಾಹವನ್ನು ಹುಟ್ಟುಹಾಕುವುದು. ಈ ವಿದ್ಯಾರ್ಥಿಗಳು ಮುಂದಿನ 2-3 ದಶಕಗಳಲ್ಲಿ ಶಾಲೆಗಳಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸಲಿದ್ದಾರೆ .ಅವರು ವಿದ್ಯಾರ್ಥಿಗಳಿಗೆ ಜನಪ್ರಿಯ ಶಿಕ್ಷಕರಾಗುವುದು ಹೇಗೆ? ಬೋಧನಾ ವೃತ್ತಿಯಲ್ಲಿ ನೈತಿಕತೆ ಮತ್ತು ಮೌಲ್ಯಗಳ ಪ್ರಾಮುಖ್ಯತೆಯನ್ನು ಅರ್ಥಮಾಡಿಕೊಳ್ಳಲು ಅವರಿಗೆ ಸಹಾಯ ಮಾಡುವ ಕುರಿತು ಚರ್ಚಿಸಲಾಯಿತು.
ಪ್ರಸ್ತಾವಿಕ ನುಡಿಗಳನ್ನಾಡಿದ ಸಂಸ್ಥಾಪಕ ಗೌ.ಕಾರ್ಯದರ್ಶಿ ಮುರಳಿ ಎಸ್.ಕಾಕೋಳು ಆಧ್ಯಾತ್ಮಿಕತೆಯ ತಳಹದಿಯ ಮೇಲೆ ಅಕ್ಷರ - ಆರೋಗ್ಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪಾಂಚಜನ್ಯ ಪ್ರತಿಷ್ಠಾನದ ಕಳೆದ ಹತ್ತು ವರ್ಷಗಳಿಂದ ಹಲವಾರು ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಂಡು ಬರುತ್ತಿದೆ . ಪ್ರತಿಷ್ಠಾನದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅಕ್ಷರ, ಆರೋಗ್ಯ , ಅಧ್ಯಾತ್ಮ ಕ್ಷೇತ್ರದಲ್ಲಿನ ಸಾಧಕ ಶ್ರೇಷ್ಠರನ್ನು ಗುರುತಿಸಿ ಪಾಂಚಜನ್ಯ ಪುರಸ್ಕಾರ ನೀಡಿ ಗೌರವಿಸುವ ಪರಿಪಾಠ ಬೆಳೆದು ಬಂದಿದೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಆರ್ಕಿಡ್ ಲ್ಯಾಮಿನೇಟ್ಸ್ ಪ್ರೆ ಲಿ. ಮತ್ತು ಬ್ಲೂನೀಮ್ ಮೆಡಿಕಲ್ ಡಿವೈಸೆಸ್ ಪ್ರೆ.ಲಿ. ರವರು ಪ್ರಾಯೋಜಿಸಿದ್ದರು. , ಪ್ರತಿಷ್ಠಾನ ಟ್ರಸ್ಟೀಗಳಾದ ಎಸ್.ವಿ.ಸುಬ್ರಹ್ಮಣ್ಯ , ಹಾಗು ವೆಂಕಟೇಶ ಆರ್. ವೇದಾಂತಿ ಉಪಸ್ಥಿತರಿದ್ದರು. ವಿವರಗಳಿಗೆ 98450 75250
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ