ಧರ್ಮಸ್ಥಳ: ಸಿರಿ ಸಂಸ್ಥೆಯ ವತಿಯಿಂದ 2024ನೇ ವರ್ಷದ ಕ್ಯಾಲೆಂಡರ್ ಡಿ.02 ರಂದು ಧರ್ಮಾಧಿಕಾರಿಗಳು ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಡಿ ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದ ಬೀಡು (ಶ್ರೀ ಹೆಗ್ಗಡೆಯವರ ನಿವಾಸ)ವಿನಲ್ಲಿ ಬಿಡುಗಡೆಗೊಳಿಸಿದರು. ಅತ್ಯಂತ ವಿಶಿಷ್ಟ .ರೀತಿಯಲ್ಲಿ ಮೂಡಿ ಬಂದಿರುವ 2024ನೇ ವರ್ಷದ ಕ್ಯಾಲೆಂಡರನ್ನು ಲೋಕಾರ್ಪಣೆಗೊಳಿಸಿ, ಶುಭ ಹಾರೈಸಿದರು.
ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಾನ್ಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಯುತ ಕೆ.ಎನ್ ಜನಾರ್ಧನರವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಪರಮಪೂಜ್ಯರಿಗೆ ಗೌರವಾರ್ಪಣೆ ಸಲ್ಲಿಸಿದರು, ಸಿರಿ ಕ್ಯಾಲೆಂಡರ್ ಮುದ್ರಣ ಕಾರ್ಯದಲ್ಲಿ ಸಹಕರಿಸಿದ ಮಂಜುಶ್ರೀ ಪ್ರಿಂಟರ್ಸ್‍ನ ಶೇಖರ್ ಹಾಗೂ ಸಿರಿ ಸಿಬ್ಬಂದಿಗಳಾದ ಪುಷ್ಪರಾಜ್ ಹಾಗೂ ಪ್ರವೀಣ್ ರವರಿಗೆ ಮೆಚ್ಚುಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಪ್ರಸನ್ನ, ಮಾರುಕಟ್ಟೆ ವಿಭಾಗದ ಜನರಲ್ ಮ್ಯಾನೇಜರ್ ಸುಧಾಕರ್, ಸಿರಿ ಸಂಸ್ಥೆಯ ವಿವಿಧ ವಿಭಾಗದ ಮೇಲ್ವಿಚಾರಕರು ಹಾಗೂ ಸಿರಿ ಸಿಬ್ಬಂದಿಗಳು ಮತ್ತು ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಕ್ಷೇತ್ರದ ಮುಖ್ಯ ಲೆಕ್ಕಾಧಿಕಾರಿಗಳಾದ ಪುರಂದರ ಭಟ್, ಉದಯ ಜೈನ್, ಮಹಾವೀರ ಅಜ್ರಿ , ರಾಜೇಂದ್ರ ದಾಸ್ ಮುಂತಾದವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ