ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದರ 26ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಗಳೂರಿನಲ್ಲಿ ನಡೆಸಲು ಯೋಜಿಸಲಾಗಿದೆ.
ಆ ಬಗ್ಗೆ ಚರ್ಚಿಸಲು ಪೂರ್ವಭಾವಿ ಸಮಾಲೋಚನಾ ಸಭೆಯನ್ನು ಡಿ.28ರಂದು ಗುರುವಾರ ಸಾಯಂಕಾಲ 4:00 ಗಂಟೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ ಕರೆಯಲಾಗಿದೆ. ಈ ಸಭೆಗೆ ಸಾಹಿತಿಗಳು, ಸಾಹಿತ್ಯ ಪರಿಷತ್ತಿನ ಸದಸ್ಯರು, ಸಾಹಿತ್ಯಾಸಕ್ತರು, ಜನಪ್ರತಿನಿಧಿಗಳು, ಸಾರ್ವಜನಿಕರು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಕಸಾಪ ಅಧ್ಯಕ್ಷ ಪ್ರೊ. ಎಂ.ಪಿ ಶ್ರೀನಾಥ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ