ದೇಲಂಪಾಡಿ ( ಕಾಸರಗೋಡು) : ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘ (ರಿ) ದೇಲಂಪಾಡಿ ಪಚಿಜಿಕಲ್ಲು ಕಾಸರಗೋಡು ಇಲ್ಲಿ 79 ನೇ ವಾರ್ಷಿಕೋತ್ಸವದಲ್ಲಿ ಕೀರಿಕ್ಕಾಡು ಸಂಸ್ಮರಣೆ, ಪ್ರಶಸ್ತಿ ಪ್ರದಾನ, ನೃತ್ಯ ವೈವಿಧ್ಯ ಭಜನೆ, ಯಕ್ಷಗಾನ ತಾಳಮದ್ದಳೆ, ಯಕ್ಷಗಾನ ಬಯಲಾಟವು ಡಿ.23 ರಂದು ಶನಿವಾರ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕøತಿಕ ಅಧ್ಯಯನ ಕೇಂದ್ರ ಬನಾರಿ ದೇಲಂಪಾಡಿ ನಲ್ಲಿ ನಡೆಯಿತು.
ಬೆಳಿಗೆ 9.30 ಕ್ಕೆ ಮಧ್ವಾದೀಶ ವಿಠಲದಾಸ ಶ್ರೀ ರಾಮಕೃಷ್ಣ ಕಾಟುಕುಕ್ಕೆಯವರ ಮಾರ್ಗದರ್ಶನದಲ್ಲಿ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಬನಾರಿ ಮತ್ತು ಶ್ರೀ ವಾಗ್ಹೇವಿ ಭಜನಾ ಮಂಡಳಿ ಕಾವು ಇವರಿಂದ ಭಜನಾ ಕಾರ್ಯಕ್ರಮ ನೆರವೇರಿತು. ಪೂರ್ವಾಹ್ನ 11.15ಕ್ಕೆ ಸಂಘದ ಮಹಿಳಾ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆ ನಡೆಯಿತು.
ಅಪರಾಹ್ನ 12.15 ರಿಂದ ದೇಲಂಪಾಡಿ ಶಾಲಾ ಮಕ್ಕಳಿಂದ ನೃತ್ಯ ವೈವಿಧ್ಯ ನಡೆಯಿತು. 12.45 ರಿಂದ ಬನಾರಿ ಅಂಗನವಾಡಿ ಪುಟಾಣಿಗಳಿಂದ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ ನಡೆಯಿತು.
ಶ್ರೀ ಪದ್ಯಾಣ ಶಂಕರನಾರಾಯಣ ಭಟ್, ಖ್ಯಾತ ಹಿರಿಯ ಮದ್ದಳೆಗಾರರು ಇವರರಿಗೆ ಪ್ರಶಸ್ತಿ ಪ್ರದಾನ ರ್ಯಕ್ರಮ ನಡೆಯಿತು. ಸಂಘದ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ತಾಳಮದ್ದಳೆ ನಡೆಯಿತು. ರಾತ್ರಿ 7 ಗಂಟೆಗೆ ಶಕಟಾಸುರ ವಧೆ, ತರಣಿ ಕಾಳಗ, ಗಿರಿಜಾ ಕಲ್ಯಾಣ ಎಂಬ ಯಕ್ಷಗಾನ ಬಯಲಾಟ ನಡೆಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ