ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ವಾರ್ಷಿಕ ಕ್ರೀಡೋತ್ಸವ

Upayuktha
0



ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ವಾರ್ಷಿಕ ಕ್ರೀಡೋತ್ಸವವು ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗೋಪಾಲ ಗೌಡ ಕ್ರೀಡೋತ್ಸವಕ್ಕೆ ಚಾಲನೆಯನ್ನು ನೀಡಿ, ಕ್ರೀಡಾಳುಗಳಿಗೆ ಶುಭ ಹಾರೈಸಿದರು. 




ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಅಧ್ಯಕ್ಷತೆ ವಹಿಸಿದ್ದರು. ಶಾಲಾ ದಶಮಾನೋತ್ಸವ ಸಮಿತಿಯ ಅಧ್ಯಕ್ಷ ಮಹೇಶ್ ಕಜೆ, ಶಾಲಾ ಪ್ರಾಂಶುಪಾಲೆ ಮಾಲತಿ ಡಿ ಹಾಗೂ ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು. 




ದೈಹಿಕ ಶಿಕ್ಷಣ ಶಿಕ್ಷಕಿ ಸುಚಿತ್ರ ಸ್ವಾಗತಿಸಿದರು. ಶಿಕ್ಷಕಿ ಮಲ್ಲಿಕಾ ವಂದಿಸಿದರು. ಶಿಕ್ಷಕಿ ಕೃತಿಕಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಗಾಗಿ ಹಾಗೂ ಹೆತ್ತವರಿಗಾಗಿ ಏರ್ಪಡಿಸಿದ್ದ ಈ ಕ್ರೀಡೋತ್ಸವವು ದೈಹಿಕ ಶಿಕ್ಷಕರಾದ ಸುಚಿತ್ರ ಹಾಗೂ ಮಹೇಶ್ ಇವರ ನೇತೃತ್ವದಲ್ಲಿ ಯಶಸ್ವಿಯಾಗಿ ನೆರವೇರಿತು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  



Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top