ಪಾಣಾಜೆ ಸುಬೋಧ ಪ್ರೌಢಶಾಲೆಯ ವಾರ್ಷಿಕೋತ್ಸವ

Upayuktha
0




ಪಾಣಾಜೆ: ಪಾಣಾಜೆ ವಿದ್ಯಾವರ್ಧಕ ಸಂಘ (ರಿ),  ಸುಬೋಧ ಪ್ರೌಢಶಾಲೆ ಪಾಣಾಜೆ,ಇವುಗಳ ಸಂಯುಕ್ತ ಆಶ್ರಯದಲ್ಲಿ  ಪ್ರೌಢಶಾಲಾ ವಾರ್ಷಿಕೋತ್ಸವವು ದಶಂಬರ 23 ರಂದು ಪಾಣಾಜೆ ಗ್ರಾಮ ಪಂಚಾಯತಿನ ಅಧ್ಯಕ್ಷರಾದ ಮೈಮುನತುಲ್ ಮೆಹ್ರಾ ಅವರ ಅಧ್ಯಕ್ಷತೆಯಲ್ಲಿ  ವಿಜೃoಭಣೆಯಿಂದ ಜರಗಿತು.




ಬೆಳಗ್ಗೆ, ಪಾಣಾಜೆ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾದ ಕಡಂದೇಲು ಈಶ್ವರ ಭಟ್ ರವರು ಧ್ವಜಾರೋಹಣ ಮಾಡಿ ಶಾಲಾ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿದರು. ಸಂಜೆ ಸಭಾ ಕಾರ್ಯಕ್ರಮದ ಪೂರ್ವದಲ್ಲಿ  ಗಣಪತಿ ಬಲ್ಯಾಯ ನೇತೃತ್ವದ ರಣಮಂಗಳ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಸಂಘದಿಂದ ಶಾಲಾ ಮಕ್ಕಳು ಕುಣಿತ ಭಜನೆಯನ್ನು ಪ್ರದರ್ಶಿಸಿದರು. 




ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಹಾಗೂ ಶಾಲಾ ಸಂಚಾಲಕರಾದ ಶ್ರೀ ಮಹಾಬಲೇಶ್ವರ ಭಟ್ ಗಿಳಿಯಾಲು ಅವರು ಪ್ರಾಸ್ತಾವಿಕ ನುಡಿಗಳೊಂದಿಗೆ ಸರ್ವರನ್ನು ಆದರಿಂದ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಶ್ರೀಪತಿ ಭಟ್ ಇಂದಾಜೆಯವರು ಶಾಲಾ ವಾರ್ಷಿಕ ವರದಿಯನ್ನು ಮಂಡಿಸಿದರು.




ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ  ಶ್ರೀನಿಧಿ ನಿಡುಗಳ, ಮ್ಯಾನೇಜರ್ QA ಇಂಜಿನಿಯರಿಂಗ್ ಕೋಮ್ಸ್ಕೋಪ್ ಬೆಂಗಳೂರು ಅವರು ಜೀವನದಲ್ಲಿ ಯಶಸ್ಸನ್ನು ಗಳಿಸಲು ಶ್ರದ್ಧೆ  ಆತ್ಮವಿಶ್ವಾಸ, ಪ್ರಯತ್ನ,  ಗುರಿ ಇರಬೇಕೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು.



ಇನ್ನೋರ್ವ ಮುಖ್ಯ ಅತಿಥಿಯಾಗಿ ಆಗಮಿಸಿದ  ವಿಜಯ ಪ್ರವೀಣ, ಶಾಲಾ ಹಿರಿಯ ವಿದ್ಯಾರ್ಥಿ, ಸೀನಿಯರ್ ರಿಸೋರ್ಸ್ ಮ್ಯಾನೇಜರ್, ಇನ್ಫೋಸಿಸ್ ಮುಡಿಪ್ಪು  ಇವರು ತಮ್ಮ ಶಾಲಾ ಜೀವನದ ಸವಿನೆನಪುಗಳನ್ನು ಬಿಚ್ಚಿಟ್ಟು ಮುಂದಿನ ವರ್ಷದಿಂದ ಶಾಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿದ ಕ್ರೀಡಾ ಪ್ರತಿಭೆಗಳಿಗೆ, ಪ್ರತಿ ವರ್ಷ ವಿಶೇಷ ಬಹುಮಾನಗಳನ್ನು ನೀಡುವುದಾಗಿ ಘೋಷಿಸಿದರು. 




ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿದ್ದ ಪಾಣಾಜೆ ಗ್ರಾಮ ಪಂಚಾಯತಿನ ಅಧ್ಯಕ್ಷರಾದ ಶ್ರೀಮತಿ ಮೈಮುನತುಲ್ ಮೆಹ್ರಾ ಅವರು ವಿದ್ಯಾರ್ಥಿಗಳ ಸಂಕುಚಿತ ಮನೋಭಾವವನ್ನು ಹೋಗಲಾಡಿಸಲು ಶಾಲಾ ವಾರ್ಷಿಕೋತ್ಸವವು ಪ್ರಮುಖ ಪಾತ್ರವಹಿಸುತ್ತದೆ ಎಂದರು.




ಪಾಣಾಜೆ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿರುವ ಉಪೇಂದ್ರ ಬಲ್ಯಾಯ, ದೇವಸ್ಯ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ  ರವೀಂದ್ರ ಭಂಡಾರಿ ಬೈಂಕ್ರೋಡು ಅವರು ಶುಭಾಶಂಸನೆಗೈದರು.




ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ  ಭಾಸ್ಕರ ಪೂಜಾರಿ ನಡುಕಟ್ಟ ಹಾಗೂ ಶಾಲಾ ವಿದ್ಯಾರ್ಥಿ ನಾಯಕ ಮಾII ದೀಪಕ್ ಇವರು ಸಭಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಾಲಾ ಮಕ್ಕಳಾದ ದೀಪಕ್, ಸಿಂಚನ ಹಾಗೂ ದೀಪಿಕಾ ಪ್ರಾರ್ಥಿಸಿದರು.




ಪ್ರತಿಭಾ ಪುರಸ್ಕಾರ

ಈ ಸಂದರ್ಭದಲ್ಲಿ 2022 - 23ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಕು.ಅರ್ಪಿತಾ ಹಾಗೂ ಕು.ತನುಶ್ರೀ ಇವರಿಗೆ ಆಡಳಿತ ಮಂಡಳಿಯ ಕಾರ್ಯದರ್ಶಿ ಹಾಗೂ ಶಾಲಾ ಸಂಚಾಲಕರಾದ  ಮಹಾಬಲೇಶ್ವರ ಭಟ್ ಗಿಳಿಯಾಲು ಅವರು ಪ್ರತಿವರ್ಷದಂತೆ ಶಾಲು ಹೊದೆಸಿ ಫಲಪುಷ್ಪ, ಬೆಳ್ಳಿ ಪದಕ,ನಗದು ಬಹುಮಾನ ಹಾಗೂ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ನಿರ್ಮಲ ಇವರು ಪ್ರಥಮ ಸ್ಥಾನ ಗಳಿಸಿದ  ಕು. ಅರ್ಪಿತಾ ಇವರಿಗೆ ಸ್ವರ್ಣ ಪದಕ ನೀಡಿ ಗೌರವಿಸಿದರು.ಶಾಲಾ ಶಿಕ್ಷಕಿಯಾದ ಶ್ರೀಮತಿ ವಿನುತಾ ಕುಮಾರಿ ಇವರು ಕು.ತನುಶ್ರೀ ಇವರಿಗೆ ನಗದು ಬಹುಮಾನವನ್ನು ನೀಡಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಸಾಧನೆಗೈದ ವಿದ್ಯಾರ್ಥಿಗಳಾದ ಫಾತಿಮಾ ಅಫ್ನ ಹಾಗೂ ನೆಫೀಸತ್ ಮಶ್ ರೂಫಾ ಇವರನ್ನು ಶಾಲು ಹೊದೆಸಿ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅತಿಥಿಗಳು ದತ್ತಿ ನಿಧಿ ಹಾಗೂ ಬಹುಮಾನಗಳನ್ನು ವಿತರಿಸಿದರು.





ಶಾಲಾ ಶಿಕ್ಷಕಿ ಶ್ರೀಮತಿ ವಿನುತಾ ದತ್ತಿನಿಧಿ ವಿತರಣಾ ಕಾರ್ಯಕ್ರಮವನ್ನು ನೆರವೇರಿದರು. ಶಾಲಾ ಶಿಕ್ಷಕಿಯರಾದ ಕುಮಾರಿ ಕವಿತಾ ಹಾಗೂ ಕುಮಾರಿ ಹರ್ಷಿತಾ ಬಹುಮಾನ ವಿತರಣಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಸುಧೀರ್ ಎಸ್ ಪಿ ಅವರು ಸರ್ವರಿಗೂ ವಂದಿಸಿದರು.




ಶಾಲಾ ಶಿಕ್ಷಕಿ ಶ್ರೀಮತಿ ನಿರ್ಮಲಾ ಹಾಗೂ ಪ್ರಶಿಕ್ಷಣಾರ್ಥಿ ಕು.ಪ್ರತಿಭಾ  ಸಭಾಕಾರ್ಯಕ್ರಮದ ನಿರೂಪಣೆಗೈದರು. ಶಾಲಾ ಶಿಕ್ಷಕಿ ಶ್ರೀಮತಿ ಶಾರದಾ ಹಾಗೂ ಪ್ರಶಿಕ್ಷಣಾರ್ಥಿ ಶ್ರೀಮತಿ ರೇಶ್ಮ ಸಹಕರಿಸಿದರು. ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು. ಶಾಲಾ ಸಿಬ್ಬಂದಿ ವರ್ಗ, ಹಿರಿಯ ವಿದ್ಯಾರ್ಥಿಗಳು, ಊರ ಬಂಧುಗಳು, ಹಿತೈಷಿಗಳು ಹಾಗೂ ಸರ್ವರ ಉಪಸ್ಥಿತಿ ಹಾಗೂ ಸಹಕಾರದಿಂದ ಶಾಲಾ ವಾರ್ಷಿಕೋತ್ಸವವು ಸಂಭ್ರಮ ಸಡಗರದಿಂದ ಜರಗಿತು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter    

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top