ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಕಾಲೇಜು ಇದರ ಅಧೀನದಲ್ಲಿ ನಾಗರಿಕ ಸೇವೆಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಮಟ್ಟದಿಂದ ಉಚಿತ ತರಬೇತಿಯನ್ನು ಯಶಸ್ ಮೂಲಕ ನೀಡಲಾಗುತ್ತದೆ.
ಈ ನಿಟ್ಟಿನಲ್ಲಿ 10 ನೇ ತರಗತಿ ಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ. ಪ್ರವೇಶ ಪರೀಕ್ಷೆಯು ಡಿಸೆಂಬರ್ 25 ರಂದು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಡಿ.20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿಯನ್ನು yashas.vivekanandaedu.org ನಿಂದ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಪೋಸ್ಟ್ ಮೂಲಕವು ಕಳುಹಿಸಿಕೊಡಬಹುದು ಮತ್ತು ಆನ್ ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು ಎಂದು ಕಾಲೇಜು ಆಡಳಿತ ಮಂಡಳಿಯು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9901852117
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ