ಪುತ್ತೂರು: ಅಡುಧಾಬಿಯಲ್ಲಿ ಡಿಸೆಂಬರ್ 12 ರಿಂದ 23 ರವರೆಗೆ ನಡೆದ 25ನೇ ಏಷ್ಯನ್ ಯೂತ್ ಚೆಸ್ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಧನುಷ್ ರಾಮ್ ಮತ್ತು ತಂಡದವರು ರಾಪಿಡ್ ಚೆಸ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಮತ್ತು ಸ್ಟ್ಯಾಂಡರ್ಡ್ ಚೆಸ್ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಈತನು ಪುತ್ತೂರು ಕರಿಯಾಲದ ದಿನೇಶ್ ಪ್ರಸನ್ನ ಮತ್ತು ಉಮಾ ದಂಪತಿ ಪುತ್ರ. ವಿದ್ಯಾರ್ಥಿಯ ಈ ವಿಶೇಷ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ