ಇಂದು ಸಂಜೆ ಬೆಂಗಳೂರು ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ

Upayuktha
0

ಗಾಂಧೀಜಿ ಮತ್ತು ಅಂಬೇಡ್ಕರ್ ಪ್ರಸ್ತುತತೆ ಕುರಿತು



ಬೆಂಗಳೂರು: ಗಾಂಧಿ ಶಾಂತಿ ಪ್ರತಿಷ್ಠಾನ ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಶೇಷಾದ್ರಿಪುರಂ ಸಂಜೆ ಪದವಿ  ಕಾಲೇಜು ಸಹಯೋಗದಲ್ಲಿ ಬ್ರಹ್ಮ ಸಮಾಜದ ಮುಖಂಡ ಮತ್ತು ಹಿರಿಯ ಗಾಂಧಿವಾದಿ ಡಬ್ಲ್ಯೂ ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸವನ್ನು ನಗರದ ಗಾಂಧಿಭವನದ ಶ್ರೀ ಮೈಲಾರ ಮಹಾದೇವ ಸಭಾಂಗಣದಲ್ಲಿ ಡಿಸೆಂಬರ್ 20 ಬುಧವಾರ, ಸಂಜೆ 4-30ಕ್ಕೆ ಆಯೋಜಿಸಲಾಗಿದೆ.


'ಗಾಂಧೀಜಿ ಮತ್ತು ಅಂಬೇಡ್ಕರ್ ಪ್ರಸ್ತುತತೆ' ವಿಷಯದ ಕುರಿತು ದತ್ತಿ ಉಪನ್ಯಾಸವನ್ನು ಹಿರಿಯ ವಿದ್ವಾಂಸ ಮತ್ತು ಕಲಬುರ್ಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ  ಡಾ. ಎಚ್.ಟಿ.ಪೋತೆ  ನೀಡಲಿದ್ದಾರೆ. ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಮತ್ತು ಗಾಂಧಿ ಶಾಂತಿ ಪ್ರತಿಷ್ಠಾನ ಅಧ್ಯಕ್ಷ  ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ ಅಧ್ಯಕ್ಷತೆ ವಹಿಸುವ ಸಮಾರಂಭದಲ್ಲಿ ಹಿರಿಯ ಶಿಕ್ಷಣ ತಜ್ಞ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಹಾಗೂ ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌ. ಪ್ರಧಾನ ಕಾರ್ಯದರ್ಶಿ,  ನಾಡೋಜ ಡಾ. ವೂಡೇ.ಪಿ. ಕೃಷ್ಣ, ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗೌರವ ಕಾರ್ಯದರ್ಶಿ ಎಂ.ಸಿ ನರೇಂದ್ರ ,  ದತ್ತಿ ದಾನಿಗಳ ಪ್ರತಿನಿಧಿ ಡಬ್ಲೂ ಡಿ.ಅಶೋಕ್ ,  ಗಾಂಧಿ ಶಾಂತಿ ಪ್ರತಿಷ್ಠಾನದ ಕಾರ್ಯದರ್ಶಿ ಡಾ. ಸತ್ಯಮಂಗಲ ಮಹಾದೇವ  ಹಾಗೂ ಶೇಷಾದ್ರಿಪುರಂ ಸಂಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್.ಎಸ್.ಸತೀಶ್ ಉಪಸ್ಥಿತರಿರುವರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Advt Slider:
To Top