ಮಂಗಳೂರು: ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯು ಸಾನಿಧ್ಯದ ಯಜಮಾನರು ಹಾಗೂ ದೈವಾರಾಧಕರಾದ ಭಾಸ್ಕರ ಬಂಗೇರ ಇವರ ನೇತ್ರತ್ವದಲ್ಲಿ ಭಾನುವಾರ (ಡಿ.3) ಬೆಳಿಗ್ಗೆ 10 ಗಂಟೆಗೆ ತಂತ್ರಿಗಳಾದ ಶ್ರೀ ರವಿ ಆನಂದ ಶಾಂತಿ ಆಡುಮರೋಳಿ ಇವರ ಮಾರ್ಗದರ್ಶನದಲ್ಲಿ ಜರುಗಿತು.
ಅಂದು ಬೇಳಿಗೆಯಿಂದ ಮಧ್ಯಾಹ್ನದವರೆಗೆ ನಡೆದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯಲ್ಲಿ ಕೇಮಾರು ಮಠದ ಈಶ ವಿಠಲದಾಸ ಸ್ವಾಮೀಜಿ ಆಶೀರ್ವಚನ ನೀಡಿದರು.
ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಯಕ್ಷಧ್ರುವ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಕುಮಾರ್ ಶೆಟ್ಟಿ, ಮಂಕಿಸ್ಟ್ಯಾಂಡ್ ಕಟೀಲ್ದಪ್ಪೆ ಸನ್ನಿಧಿಯ ಅರ್ಚಕರಾದ ಪ್ರಾಣೇಶ್, ಬಿಜೆಪಿ ಮುಖಂಡ ಬ್ರಿಜೇಶ್ ಚೌಟ, ವಸಂತ್ ಪೂಜಾರಿ, ಪ್ರಮುಖರಾದ ಕದ್ರಿ ನವನೀತ ಶೆಟ್ಟಿ, ಕೆ.ಕೆ. ಪೇಜಾವರ, ಪ್ರದೀಪ್ ಕುಮಾರ್ ಆಳ್ವ, ಲೀಲಾಕ್ಷ ಕರ್ಕೇರಾ, ಉದ್ಯಮಿಗಳಾದ ಎಂ. ಅಶೋಕ್ ಶೇಟ್, ನವೀನ್ ಕುಮಾರ್, ಶ್ರೀ ಕ್ಷೇತ್ರದ ಸೇವಾಕರ್ತರುಗಳಾದ ಪೂಜ್ಯ ಮಾತಶ್ರೀ ವಿಮಲಾ ಹಾಗೂ ಶ್ರೀಮತಿ ವಿಜಯ ಭಾಸ್ಕರ ಬಂಗೇರ ಮುಂತಾದವರು ಪಾಲ್ಗೊಂಡಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ