ಬಿಲ್ಲವ ಸಮಾಜ ಸೇವಾ ಸಂಘ ಕಲ್ಲಡ್ಕ ವಲಯ ವತಿಯಿಂದ ಬಿಲ್ಲವ ಕ್ರೀಡಾಕೂಟ

Upayuktha
0


ಬಂಟ್ವಾಳ: ಗೋಳ್ತಮಜಲು, ಬಾಳ್ತಿಲ, ವೀರಕಂಬ, ಅಮ್ಮ್ಟೂರು, ಬೋಳಂತೂರು, ಬೊಂಡಾಲ ಗ್ರಾಮಗಳನ್ನು ಒಳಗೊಂಡ ಬಿಲ್ಲವ ಸಮಾಜ ಸೇವಾ ಸಂಘ (ರಿ)ಕಲ್ಲಡ್ಕ ವಲಯ ವತಿಯಿಂದ ಬಿಲ್ಲವ ಕ್ರೀಡಾಕೂಟ-2023 ಕಲ್ಲಡ್ಕ ಸರ್ಕಾರಿ ಶಾಲಾ ಮೈದಾನದಲ್ಲಿ ಉದ್ಯಮಿ ಕಿಶೋರ್ ಕಟ್ಟೆಮಾರ್ ದೀಪ ಬೆಳಗಿಸಿ ಉದ್ಘಾಟಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.



ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಾಗಿರದೆ ನಮ್ಮ ಒಗ್ಗಟ್ಟನ್ನು ಮತ್ತಷ್ಟು ಗಟ್ಟಿಗೊಳಿಸಲಿ ಎಂದು ಮಾಜಿ ಸೈನಿಕರಾದ ಚಂದ್ರಶೇಖರ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.


ಉಪಯುಕ್ತ ಇ-ಪೇಪರ್ ಓದಲು ಕ್ಲಿಕ್‌ ಮಾಡಿ:


ಈ ಸಂದರ್ಭದಲ್ಲಿ ಕಲ್ಲಡ್ಕ ವಲಯ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಲಕೋಡಿ, ಗೊಳ್ತಮಜಲ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಪ್ರೇಮ, ವೀರಕಂಬ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಶಿವಾನಂದ ಎಳ್ತೀಮಾರ್, ನಾಗೇಶ್ ಪೂಜಾರಿ ಕರಿಂಗಣ, ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ ಇದರ ನಿರ್ದೇಶಕರಾದ ಲೋಕನಂದ ಎಳ್ತೀಮಾರ್, ವೀರಕಂಬ ಗ್ರಾಮ ಸಮಿತಿ ಅಧ್ಯಕ್ಷರಾದ ಜಯಪ್ರಕಾಶ್ ತೆಕ್ಕಿಪದವು, ಬೋಳಂತೂರು ಗ್ರಾಮ ಸಮಿತಿ ಅಧ್ಯಕ್ಷರಾದ ಆನಂದ ಪೂಜಾರಿ ಪ್ರಭುಗಳ ಬೆಟ್ಟು, ಕೃಷಿಕರಾದ ಜಯಂತ ಕಟ್ಟೆಮಾರ್, ಬೊಂಡಾಲ ಗ್ರಾಮ ಸಮಿತಿ ಅಧ್ಯಕ್ಷರಾದ ಯತಿನ್ ಕುಮಾರ್, ಮಂತ್ರ ದೇವತಾ ಸಾನಿಧ್ಯ ಕಟ್ಟೆಮಾರ್ ಧರ್ಮದರ್ಶಿ ಮನೋಜ್ ಕಟ್ಟೆಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಚನ್ನಪ್ಪ ಕೋಟ್ಯಾನ್ ತೋಟ, ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷರಾದ ಚಂದ್ರಶೇಖರ ಬಂಗೇರ, ಕಲ್ಲಡ್ಕ ವಲಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೊಸಕಟ್ಟ, ಸದಾಶಿವ ಬೊಂಡಾಲ, ಯುವ ವಾಹಿನಿ ಮಾಣಿ ಘಟಕ ಅಧ್ಯಕ್ಷರಾದ ರವಿಚಂದ್ರ, ಪ್ರಮುಖರಾದ ಹರೀಶ್ ಬಾಕಿಲ, ನಾಗೇಶ್ ಮಹಿಳಾ ಸಮಿತಿಯ ಅಧ್ಯಕ್ಷರಾದ ಪುಷ್ಪ ಸತೀಶ್ ದೇವಸ್ಯ ಉಪಸ್ಥಿತರಿದ್ದರು.



ಕ್ರೀಡಾಪಟುಗಳು ವಿವಿಧ ಕ್ರೀಡೆಗಳೊಂದಿಗೆ ಕ್ರೀಡೆಯಲ್ಲಿ ಪಾಲ್ಗೊಂಡರು. ಶಂಕರ ಮಾಸ್ಟರ್, ಹರೀಶ್ ಕೃಷ್ಣ ಕೊಡಿ, ಲೋಕೇಶ್, ಶ್ರೀಧರ  ರೋಹಿಣಿ, ಉಮಾವತಿ, ತೀರ್ಪುಗಾರರಾಗಿ ಸಹಕರಿಸಿದರು. ವಸಂತ ಟೈಲರ್ ನೇಟ್ಲ ಪ್ರಾರ್ಥಿಸಿ ವಸಂತ ಬಟ್ಟೀಹಿತ್ಲು ಸ್ವಾಗತಿಸಿ, ಯೋಗೇಶ್ ತೋಟ ಧನ್ಯವಾದ ಸಲ್ಲಿಸಿದರು. ಸಂತೋಷ್ ಕುಮಾರ್ ಬೊಳ್ಪೋಡಿ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top