ಬೊಮ್ಮರ ಬೆಟ್ಟು : ವಿಕಸಿತ ಭಾರತ ಸಂಕಲ್ಪ ಯಾತ್ರೆ

Upayuktha
0



ಉಡುಪಿ: ಕೇಂದ್ರ ಸರ್ಕಾರದ ಯೋಜನೆಗಳನ್ನು ಭಾರತದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಉದ್ದೇಶದಿಂದ ಭಾರತದಾದ್ಯಂತ   "ವಿಕಸಿತ ಭಾರತ ಸಂಕಲ್ಪ ಯಾತ್ರೆ" ನಡೆಯುತ್ತಿದ್ದು, ಸರ್ಕಾರ ಮನೆ ಬಾಗಿಲಿಗೆ ಯೋಜನೆಗಳನ್ನು ತಲುಪಿಸುವ ಕೆಲಸ ಮಾಡುತ್ತಿದೆ, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕಾಪು ಶಾಸಕ, ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.




ಅವರು ಇಂದು  ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಬಳಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ 17 ಯೋಜನೆಗಳ ಬಗ್ಗೆ ಜನರಿಗೆ  ಮಾಹಿತಿಯನ್ನು ಒದಗಿಸುವುದು, ಈ ಯೋಜನೆಗಳನ್ನು ಕೊನೆಯ ಮೈಲಿಯವರೆಗೂ ಮುಟ್ಟಿಸುವುದು, ಈವರೆಗೆ ಪ್ರಯೋಜನ ಪಡೆಯದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸುವುದು ಈ ಯಾತ್ರೆಯ ಉದ್ದೇಶವಾಗಿದ್ದು, ಯಾತ್ರೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಾಹನ ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಎಲ್ಇಡಿ ಪರದೆಯ ಮೂಲಕ  ಯೋಜನೆಗಳ ಮಾಹಿತಿಯನ್ನು ನೀಡಲಾಗುವುದು ಎಂದರು.




ಇದೇ ಸಂದರ್ಭದಲ್ಲಿ ಶಾಸಕರು ಫಲಾನುಭವಿಗಳಿಗೆ ಉಜ್ವಲ ಯೋಜನೆ ಅಡಿಯಲ್ಲಿ ಮಂಜೂರಾದ ಉಚಿತ ಗ್ಯಾಸ್ ಸಂಪರ್ಕವನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ, ಉಪಾ ಇದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top