ಸುಬ್ರಹ್ಮಣ್ಯ: ತನುಶ್ರೀ ಸಾಹಿತ್ಯ ಸಾಂಸ್ಕೃತಿಕ ಕಲಾ ವೇದಿಕೆ ರಾಜ್ಯ ಘಟಕ ಚಿತ್ರದುರ್ಗ ವತಿಯಿಂದ ನೀಡುವ ಅತ್ಯಂತ ಪ್ರತಿಷ್ಠಿತ ರಾಜ್ಯ ಪ್ರಶಸ್ತಿ ಆದ ಉದಯೋನ್ಮುಖ ಕಾವ್ಯ ಚೇತನ ರಾಜ್ಯ ಪ್ರಶಸ್ತಿ ಎಂಬ ಅತ್ಯುನ್ನತ ಪ್ರಶಸ್ತಿಗೆ ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯ ಪುತ್ತೂರು ಇಲ್ಲಿನ ಪತ್ರಿಕೋದ್ಯಮ ವಿದ್ಯಾರ್ಥಿನಿ ಅನನ್ಯ ಎಚ್ ಸುಬ್ರಹ್ಮಣ್ಯ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಯು ಕವನ ಹಾಗೂ ಪತ್ರಿಕೆಗಳಲ್ಲಿ ಪ್ರಕಟಗೊಂಡಂತಹ ಲೇಖನಗಳನ್ನು ಗುರುತಿಸಿ ನೀಡಲಾಗಿದೆ. ಈಕೆಯು ಹಲವು ಕಡೆಗಳಲ್ಲಿ ಕವಿಗೋಷ್ಠಿ ಭಾಗವಹಿಸುತ್ತಾ ನಿತ್ಯವು ಬರೆಯುವ ಹವ್ಯಾಸವನ್ನು ಹೊಂದಿರುತ್ತಾರೆ. ಇವರು ಗಂಗಾಧರ-ಜಯಶ್ರೀ ದಂಪತಿಯ ಪುತ್ರಿ. ಈಕೆಯ ತಮ್ಮ ಅನ್ವಿತ್ ಎಚ್ ದ್ವಿತೀಯ ಪಿಯುಸಿ ಓದುತ್ತಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ