ದ.ಕ. ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಮಹಾಸಭೆ
ಮಂಗಳೂರು: ಆರೋಗ್ಯಕರ ಸಮಾಜ ನಿರ್ಮಾಣ ರೆಡ್‌ಕ್ರಾಸ್ ಸಂಸ್ಥೆಯ ಗುರಿಯಾಗಿದೆ. ರಕ್ತದಾನ, ಆರೋಗ್ಯ ಕಾಳಜಿ, ವಿಪತ್ತು ಪರಿಹಾರ ಸಹಿತ ಹಲವು ಸೇವಾ ಕಾರ್ಯಗಳ ಮೂಲಕ ರೆಡ್‌ಕ್ರಾಸ್ ಸಮಾಜಕ್ಕೆ ನೆರವಾಗುತ್ತಿದೆ ಎಂದು ದ.ಕ.ಜಿಲ್ಲಾ ಘಟಕದ ಉಪಾಧ್ಯಕ್ಷ, ದ.ಕ. ಪಂಚಾಯತ್‌ನ ಸಿಇಒ ಡಾ.ಆನಂದ.ಕೆ. ಹೇಳಿದರು.
ದ.ಕ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ದ.ಕ. ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ‘ರಕ್ತದಾನ ಹಾಗೂ ರಕ್ತ ವರ್ಗಾವಣೆ ಸಂದರ್ಭ ಗುಣಮಟ್ಟ ಮತ್ತು ಸುರಕ್ಷತೆಗೆ ಕಾಳಜಿ ವಹಿಸುವುದು ಅಗತ್ಯ. ಈ ನಿಟ್ಟಿನಲ್ಲಿ ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಬ್ಲಡ್ ಬ್ಯಾಂಕ್ ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು.
ರೆಡ್‌ಕ್ರಾಸ್ ಸೊಸೈಟಿಯ ಕಾರ್ಯಚಟುವಟಿಕೆಗಳ ಬಗ್ಗೆ ಸದಸ್ಯರಿಗೆ ಮತ್ತು ಸಾರ್ವನಿಕರಿಗೆ ಪ್ರತ್ಯೇಕ ವೆಬ್‌ಸೈಟ್ ಮೂಲಕ ಮಾಹಿತಿ ನೀಡುವಂತೆ ಡಾ.ಆನಂದ್ ಸೂಚಿಸಿದರು.
ರೆಡ್‌ಕ್ರಾಸ್ ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ ಮಾತನಾಡಿ ‘ಲೇಡಿಗೋಷನ್ ಆಸ್ಪತ್ರೆಯ ಆವರಣದಲ್ಲಿರುವ ಬ್ಲಡ್ ಬ್ಯಾಂಕ್ ಮೇಲ್ದರ್ಜೆಗೆ ಏರಿಸುವ ಗುರಿ ಹೊಂದಲಾಗಿದೆ. ಸುಮಾರು 6 ಕೋಟಿ ರೂ.ವೆಚ್ಚದಲ್ಲಿ ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡ ನಿರ್ಮಾಣವಾಗುತ್ತಿದ್ದು, ಭವಿಷ್ಯದಲ್ಲಿ ಇನ್ನಷ್ಟು ಸೇವಾ ಕಾರ್ಯಗಳನ್ನು ನೀಡಲು ಇದು ನೆರವಾಗಲಿದೆ ಎಂದರು.
ಸದಸ್ಯರಾದ ಹನುಮಂತ ಕಾಮತ್, ಪದ್ಮನಾಭ ಉಳ್ಳಾಲ್, ಕಿರಣ್ ಕೋಡಿಕಲ್, ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ, ಚೇರ್ಕಾಡಿ ಸಚ್ಚಿದಾನಂದ ಶೆಟ್ಟಿ ಮುಂತಾದವರು ಸಲಹೆ ಸೂಚನೆ ನೀಡಿದರು. ರೆಡ್‌ಕ್ರಾಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ.ಸತೀಶ್ ರಾವ್, ಖಜಾಂಜಿ ಮೋಹನ್ ಶೆಟ್ಟಿ.ಕೆ., ನಿರ್ದೇಶಕರಾದ ಯತೀಶ್ ಬೈಕಂಪಾಡಿ, ಪುಷ್ಪರಾಜ್ ಜೈನ್, ಡಾ.ಬಿ.ಸಚ್ಚಿದಾನಂದ ರೈ, ಗುರುದತ್ತ್ ಎಂ. ನಾಯಕ್, ವಿಠಲ.ಎ., ಸುಮನ.ಬಿ., ಪಿ.ಬಿ.ಹರೀಶ್ ರೈ, ಕಾರ್ಯದರ್ಶಿ ಸಂಜಯ ಶೆಟ್ಟಿ, ಗೌರವ ಸಲಹೆಗಾರರಾದ ಪ್ರಭಾಕರ ಶರ್ಮ, ರವೀಂದ್ರನಾಥ ಉಚ್ಚಿಲ, ಸುಳ್ಯ ಘಟಕದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಬೆಳ್ತಂಗಡಿ ಘಟಕದ ಹರಿದಾಸ್.ಎಸ್.ಎಂ., ಪುತ್ತೂರು ಘಟಕದ ಸಂತೋಷ್ ಶೆಟ್ಟಿ, ಯೂತ್ ರೆಡ್‌ಕ್ರಾಸ್ ನಿರ್ದೇಶಕ ಸಚೇತ್ ಸುವರ್ಣ ಉಪಸ್ಥಿತರಿದ್ದರು. ಡಾ.ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ