ಮಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ರಾಜ್ಯಮಟ್ಟದ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್'-2024'ಕ್ರಿಕೆಟ್ ಪಂದ್ಯಾಟ ಜ.5 ರಿಂದ 7 ರವರೆಗೆ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದ ಕ್ಯಾ.ಪ್ರಾಂಜಲ್ (ಪೆವಿಲಿಯನ್)ಸ್ಮರಣೆಯೊಂದಿಗೆ ನಡೆಯಲಿದೆ ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳ 25ಕ್ಕೂ ಅಧಿಕ ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಲಿವೆ.
ಪಂದ್ಯಾಟದ ಲಾಂಛನವನ್ನು ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಳಗಾವಿಯಲ್ಲಿ ಅನಾವರಣಗೊಳಿಸಿದ್ದಾರೆ.
ಜ.5ರಂದು ಸಂಜೆ 5.30 ಪಂದ್ಯಾಟದ ಉದ್ಘಾಟನಾ ಸಮಾರಂಭ ನಡೆಯಲಿದೆ. ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ನಳಿನ್ ಕುಮಾರ್ ಕಟೀಲು, ಎಸ್‌ಸಿಡಿಸಿಸಿ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್, ರೋಹನ್ ಕಾರ್ಪೊರೇಶನ್ ಆಡಳಿತ ನಿರ್ದೇಶಕ ರೋಹನ್ ಮೊಂತೆರೊ ಮತ್ತಿತರರು ಭಾಗವಹಿಸಲಿದ್ದಾರೆ.
ಸಮಾರೋಪ ಸಮಾರಂಭದಲ್ಲಿ ಕ್ರೀಡಾ ಸಚಿವ ನಾಗೇಂದ್ರ, ಕ್ರೀಡಾ ಸಚಿವರು, ವಸತಿ ಸಚಿವ ಜಮೀರ್ ಅಹಮದ್ ಖಾನ್, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಭಾಗವಹಿಸಲಿದ್ದಾರೆ. ಮಾಜಿ ಸಚಿವ ಅಭಯಚಂದ್ರ ಜೈನ್ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿರುವರು ಎಂದು ಶಿವಾನಂದ ತಗಡೂರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ, ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಮತ್ತು ರವೀಂದ್ರ ಶೆಟ್ಟಿ, ಪುಷ್ಪರಾಜ್ ಬಿ.ಎನ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ