ಫೈನಲ್ ಪ್ರವೇಶಿಸಲು ಕಾಂಗ್ರೆಸ್ ವಿಫಲ: ನಳಿನ್ ಕುಮಾರ್

Upayuktha
0


ಮಂಗಳೂರು: ಮೂರು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ದೇಶದ ಜನತೆ ವಿಶ್ವಾಸ ಇರಿಸಿದ್ದಾರೆ ಎನ್ನುವುದು ಮತ್ತೆ ಸಾಬೀತಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಬಿಜೆಪಿ ಗೆಲುವಿಗೆ ಪ್ರತಿಕ್ರಿಯಿಸಿದ್ದಾರೆ.



ಪಂಚ ರಾಜ್ಯಗಳ ಚುನಾವಣೆ ಸೆಮಿ ಫೈನಲ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಹಲವು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ ಕಾಂಗ್ರೆಸ್‌ ಫೈನಲ್ ಪ್ರವೇಶಿಸಲು ವಿಫಲವಾಗಿದೆ ಎನ್ನುವುದನ್ನು ಈ ಫಲಿತಾಂಶ  ದೃಢಪಡಿಸಿದಂತಾಗಿದೆ. ಯಾರು ಅಪಶಕುನ ಎನ್ನುವುದು ಈಗ ಕಾಂಗ್ರೆಸ್ ನಾಯಕರಿಗೆ ಅರಿವಾಗಿರಬಹುದು ಎಂದು ಅವರು ಹೇಳಿದ್ದಾರೆ.



ಲೋಕಸಭೆ ಚುನಾವಣೆಯಲ್ಲಿ ‌ಬಿಜೆಪಿ ಮತ್ತೆ ಜಯಭೇರಿ ಗಳಿಸಲು ಮೂರು ರಾಜ್ಯಗಳ ಗೆಲುವು ಹೆಚ್ಚಿನ ಶಕ್ತಿ ನೀಡಿದೆ. ವಿರೋಧ ಪಕ್ಷಗಳ ಅನುಕೂಲಕರ ಮೈತ್ರಿಯನ್ನು ಜನತೆ ತಿರಸ್ಕರಿಸಿದ್ದಾರೆ. ಮೋದಿ ಅವರು ಮತ್ತೆ ಪ್ರಧಾನಿ ಆಗುವುದನ್ನು ತಡೆಯಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ ಎಂದು ನಳಿನ್ ಕುಮಾರ್ ಹೇಳಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top