ಚಿತ್ರಾಪುರ: ವಿದ್ಯಾರ್ಥಿಗಳಿಗೆ ಮೌಲ್ಯಯುತ ಹಾಗೂ ಗುಣಾತ್ಮಕ ಶಿಕ್ಷಣವನ್ನು ನೀಡಿ ಸತ್ಪ್ರಜೆಗಳನ್ನಾಗಿ ರೂಪಿಸುವ ಹೊಣೆಗಾರಿಕೆ ಶಿಕ್ಷಕ ಹಾಗೂ ಪೋಷಕರದ್ದಾಗಿದೆ. ಸೃಜನಶೀಲ ಅಭಿವ್ಯಕ್ತಿ ಸಾಮಥ್ರ್ಯ ಸರಕಾರಿ ಶಾಲೆಯ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿರುತ್ತದೆ ಎಂದು ಶಿಕ್ಷಣ ತಜ್ಞ ಡಾ.ಕೆ. ರಾಜಮೋಹನ ರಾವ್ ನುಡಿದರು.
ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಪ್ರಾಥಮಿಕ ಶಾಲೆ (ಫಿಶರೀಸ್) ಚಿತ್ರಾಪುರ ಕುಳಾಯಿ ಮತ್ತು ಹಳೆ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಿದ್ದರು.
ಮುಖ್ಯ ಅತಿಥಿ ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಹಾಗೂ ಮಾಜಿ ಉಪ ಮೇಯರ್ ವೇದಾವತಿ ಮಾತನಾಡಿ ಸರಕಾರಿ ಮಟ್ಟದಲ್ಲಿ ದೊರೆಯುವ ಅನುದಾನಗಳನ್ನು ನೀಡುವ ಮೂಲಕ ಶಾಲಾಭಿವೃದ್ಧಿಗೆ ಶ್ರಮಿಸಲಾಗುವುದೆಂದು ನುಡಿದರು.
ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲ ಹಾಗೂ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರೊ.ಪಿ. ಕೃಷ್ಣಮೂರ್ತಿ ಮಾತನಾಡಿ ವಿವಿಧ ಸೇವಾ ಹಾಗೂ ಕೈಗಾರಿಕಾ ಸಂಸ್ಥೆಗಳ ಮೂಲಕ ಶಾಲಾಭಿವೃದ್ಧಿಯನ್ನು ಮಾಡಲಾಗುತ್ತಿದೆಂದರು. ನಿವೃತ್ತ ಶಿಕ್ಷಕಿ ಪುಷ್ಪಾವತಿ ಶ್ರೀನಿವಾಸ ರಾವ್ ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಾಧವ ಸುವರ್ಣ ಮಾತನಾಡಿ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯವಿದೆ ಎಂದರು.
ಸರಕಾರಿ ಪ್ರೌಢಶಾಲೆ ಚಿತ್ರಾಪುರದ ಮುಖ್ಯ ಶಿಕ್ಷಕ ಜೋಗಿ ಹಮ್ಮಣ್ಣ ನಾಯಕ್ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಮಂಜುಳಾ, ಕೂಳೂರು ಮೊಗವೀರ ಮಹಾಸಭಾದ ಮಾಜಿ ಆದ್ಯಕ್ಷ ಶ್ರೀನಿವಾಸ ಪುತ್ರನ್, ಸಮಾಜ ಸೇವಕ ಯೋಗೀಶ್ ಸನಿಲ್ ಕುಳಾಯಿ, ಉದ್ಯಮಿ ಲೋಕೇಶ್ ಅಮೀನ್, ಸುರಕ್ಷಾ ಸಮಿತಿ ಸದಸ್ಯ ಕುಮಾರ್ ಬಂಗೇರ, ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಸಚಿನ್ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಶೋಭಾ ಸ್ವಾಗತಿಸಿ ವರದಿ ಮಂಡಿಸಿದರು. ಶಿಕ್ಷಕಿಯರಾದ ಸಿಂತಿಯಾ, ನೀತಾ ತಂತ್ರಿ, ರೂಪಾ ಬಹುಮಾನ ಪಟ್ಟಿ ವಾಚಿಸಿದರು. ಹಿರಿಯ ಶಿಕ್ಷಕಿ ಸುಕೇಶಿನಿ ವಂದಿಸಿದರು. ಕೆ.ಕೆ. ಪೆಜಾವರ್ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ದಾನಿಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕøತಿ ಕಾರ್ಯಕ್ರಮ ನಡೆದವು. ಸುರತ್ಕಲ್ ನವರಸ ಕಲಾವಿದರಿಂದ ತುಳು ನಾಟಕ ನಡೆಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ