
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸ್ಲಿಮರ ಓಲೈಕೆಗೋಸ್ಕರ ಸವಿಧಾನದ ಆಶಯಕ್ಕೆ ವಿರುದ್ಧವಾಗಿ ನೀಡಿರುವ ಹೇಳಿಕೆಯನ್ನು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡಿಸಿದ್ದಾರೆ.
ಕಾಂಗ್ರೆಸ್ ಸ್ವಾತಂತ್ರ್ಯಪೂರ್ವದಿಂದಲೇ ಮುಸ್ಲಿಂ ಓಲೈಕೆಯ ರಾಜಕಾರಣ ಮಾಡಿಕೊಂಡು ಬಂದಿದೆ. ಇದರ ಪರಿಣಾಮದಿಂದ ಸ್ವಾತಂತ್ರ್ಯ ಬಂದ ನಂತರ ಮತೀಯ ಆಧಾರದಲ್ಲಿ ದೇಶ ವಿಭಜನೆಯಾಗಿರುವ ಇತಿಹಾಸ ನಮ್ಮ ಕಣ್ಣ ಮುಂದಿದೆ. ಈ ದೇಶದಲ್ಲಿ ನಡೆದಿಎಉವ ಪ್ರತ್ಯೇಕತೆಯ ಕೂಗಿಗೆ, ಭಯೋತ್ಪಾದನ ಕೃತ್ಯಗಳಿಗೆ, ರಾಷ್ಟ್ರ ವಿರೋಧಿ ಚಟುವಟಿಕೆಗಳಿಗೆ ಪರೋಕ್ಷವಾಗಿ ಕಾಂಗ್ರೆಸ್‌ನ ಓಲೈಕೆ ರಾಜಕಾರಣವೇ ಕಾರಣ. ಸಿದ್ದರಾಮಯ್ಯನವರ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷದ ನಿಜ ಬಣ್ಣ ಮತ್ತೊಮ್ಮೆ ಬಯಲಾಗಿದೆ. ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚಲು ಸಿದ್ದರಾಮಯ್ಯ ಯಾರು? ಈ ದೇಶ ಸಿದ್ದರಾಮಯ್ಯನವರ ಆಸ್ತಿಯೇ? ಎಂದು ಸುದರ್ಶನ ಅವರು ಪ್ರಶ್ನಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ