ಮುಖ್ಯಮಂತ್ರಿ ಸಿದ್ದರಾಮಯ್ಯನವರ ತುಷ್ಟೀಕರಣದ ಹೇಳಿಕೆಗೆ ದ.ಕ ಜಿಲ್ಲಾ ಬಿಜೆಪಿ ಖಂಡನೆ

Upayuktha
0
ವಿಹಿಂಪ ಮುಖಂಡರ ಮೇಲೆ ಕೇಸು ದಾಖಲು: ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಖಂಡನೆ



ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸ್ಲಿಮರ ಓಲೈಕೆಗೋಸ್ಕರ ಸವಿಧಾನದ ಆಶಯಕ್ಕೆ ವಿರುದ್ಧವಾಗಿ ನೀಡಿರುವ ಹೇಳಿಕೆಯನ್ನು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡಿಸಿದ್ದಾರೆ.


ಕಾಂಗ್ರೆಸ್ ಸ್ವಾತಂತ್ರ್ಯಪೂರ್ವದಿಂದಲೇ ಮುಸ್ಲಿಂ ಓಲೈಕೆಯ ರಾಜಕಾರಣ ಮಾಡಿಕೊಂಡು ಬಂದಿದೆ. ಇದರ ಪರಿಣಾಮದಿಂದ ಸ್ವಾತಂತ್ರ್ಯ ಬಂದ ನಂತರ ಮತೀಯ ಆಧಾರದಲ್ಲಿ ದೇಶ ವಿಭಜನೆಯಾಗಿರುವ ಇತಿಹಾಸ ನಮ್ಮ ಕಣ್ಣ ಮುಂದಿದೆ.  ಈ ದೇಶದಲ್ಲಿ ನಡೆದಿಎಉವ ಪ್ರತ್ಯೇಕತೆಯ ಕೂಗಿಗೆ, ಭಯೋತ್ಪಾದನ ಕೃತ್ಯಗಳಿಗೆ, ರಾಷ್ಟ್ರ ವಿರೋಧಿ ಚಟುವಟಿಕೆಗಳಿಗೆ ಪರೋಕ್ಷವಾಗಿ ಕಾಂಗ್ರೆಸ್‌ನ ಓಲೈಕೆ ರಾಜಕಾರಣವೇ ಕಾರಣ. ಸಿದ್ದರಾಮಯ್ಯನವರ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷದ ನಿಜ ಬಣ್ಣ ಮತ್ತೊಮ್ಮೆ ಬಯಲಾಗಿದೆ. ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚಲು ಸಿದ್ದರಾಮಯ್ಯ ಯಾರು? ಈ ದೇಶ ಸಿದ್ದರಾಮಯ್ಯನವರ ಆಸ್ತಿಯೇ? ಎಂದು ಸುದರ್ಶನ ಅವರು ಪ್ರಶ್ನಿಸಿದ್ದಾರೆ.


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top