ಡಿ.16: ಚಿತ್ರಾಪುರ ಕುಳಾಯಿ ಶಾಲೆಯಲ್ಲಿ ವಾರ್ಷಿಕೋತ್ಸವ

Upayuktha
0



ಚಿತ್ರಾಪುರ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ (ಫಿಸರೀಸ್) ಹಿರಿಯ ಪ್ರಾಥಮಿಕ ಶಾಲೆ, ಚಿತ್ರಾಪುರ ಕುಳಾಯಿ ಹಾಗೂ ಹಳೆ ವಿದ್ಯಾರ್ಥಿ ಸಂಘ ಅವರ ಸಹಯೋಗದೊಂದಿಗೆ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವ ಸಮಾರಂಭವು ಡಿಸೆಂಬರ್ 16ರಂದು ಸಾಯಂಕಾಲ ಆರು ಗಂಟೆಗೆ ನಡೆಯಲಿದ್ದು ವಾರ್ಷಿಕೋತ್ಸವ ಆಮಂತ್ರಣ ಪತ್ರ ಬಿಡುಗಡೆ ಮತ್ತು ಪೋಷಕರ ಸಮಾಲೋಚನಾ ಸಭೆ ಹಾಗೂ ಶ್ರಮದಾನವು ನಡೆಯಿತು.




ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಾಧವ ಸುವರ್ಣ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಸರ್ವರ ಸಹಕಾರ ಕೋರಿದರು. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರೊ.ಪಿ. ಕೃಷ್ಣಮೂರ್ತಿ, ಉಪಾಧ್ಯಕ್ಷ ದೇವದಾಸ್ ಕುಳಾಯಿ, ಜೊತೆ ಕಾರ್ಯದರ್ಶಿ ಕುಮಾರ್ ಬಂಗೇರ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಮಂಜುಳಾ, ಮಾಜಿ ಅಧ್ಯಕ್ಷ ಸಚಿನ್ ಮುಖ್ಯ ಅತಿಥಿಗಳಾಗಿದ್ದರು.



ಮುಖ್ಯ ಶಿಕ್ಷಕಿ ಶೋಭ ಸ್ವಾಗತಿಸಿದರು. ಶಿಕ್ಷಕಿ ಸುಕೇಶಿನಿ ವಂದಿಸಿದರು. ಶಿಕ್ಷಕಿಯರಾದ ನೀತಾ ತಂತ್ರಿ, ಸಿಂತಿಯಾ, ರೂಪಾ ಮತ್ತು ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. 



ವಾರ್ಷಿಕೋತ್ಸವ ಸಮಾರಂಭವು ಡಿ. 16ರಂದು  ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಾಧವ ಸುವರ್ಣರ ಅಧ್ಯಕ್ಷತೆಯಲ್ಲಿ ಜರುಗಲಿದೆ. ಮಂಗಳೂರು ನಗರ ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆಯ ಸದಸ್ರ್ಯೆ ವೇದಾವತಿ, ಡಾ. ಕೆ. ರಾಜಮೋಹನ ರಾವ್, ಬಿ. ಕರುಣಾಕರ ಶೆಟ್ಟಿ , ಪ್ರೊ. ಕೃಷ್ಣಮೂರ್ತಿ ಪಿ, ಭರತ್ ಕುಮಾರ್, ಪುಷ್ಪಾವತಿ ಶ್ರೀನಿವಾಸ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.



ಶಾಲಾ ಮಕ್ಕಳಿಂದ ಮತ್ತು ಹಳೆ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ಹಾಗೂ ಸುರತ್ಕಲ್ ನವರಸ ಕಲಾವಿದರಿಂದ ‘ನಿರೆಲ್’ ತುಳು ಸಾಮಾಜಿನ ನಾಟಕ ಜರುಗಲಿದೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


Post a Comment

0 Comments
Post a Comment (0)
Advt Slider:
To Top