ಡಿ. 22-23: ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ

Upayuktha
0



ದರ್ಬೆ : ಸಂತ ಫಿಲೋಮಿನಾ  ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ಡಿಸೆಂಬರ್ 22 ಹಾಗೂ 23 ರಂದು ಕಾಲೇಜಿನ ಪ್ರಾಂಗಣದಲ್ಲಿ ಜರುಗಲಿದೆ. 



ಡಿ 22 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಉಜಿರೆಯ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ. ಫಾ. ವಿಜಯ್ ಲೋಬೋ ವಹಿಸಲಿದ್ದಾರೆ.



ಡಿ 23 ರಂದು ಕಾಲೇಜಿನ ವಾರ್ಷಿಕೋತ್ಸವವು ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರ ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿ ಅರುಣ್ ಫುಟ್ರಾಡೋ ಅವರು ವಹಿಸಲಿದ್ದಾರೆ. ಕಾಲೇಜಿನ ಸಂಚಾಲಕ ವಂ.ರೆ.ಫಾ.ಲಾರೆನ್ಸ್ ಮಸ್ಕರೇನಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. 



ಗೌರವ ಅತಿಥಿಗಳಾಗಿ ಕಾಲೇಜಿನ ಕ್ಯಾಂಪಸ್ ನಿರ್ದೇಶಕರಾದ ರೆ.ಫಾ. ಸ್ಟ್ಯಾನಿ ಪಿಂಟೋ, ಪದವಿ ಕಾಲೇಜಿನ ಪ್ರಾಂಶುಪಾಲರಾದ ರೆ.ಡಾI ಆಂಟೋನಿ ಪ್ರಕಾಶ್ ಮೊಂಥೆರೋ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಜೆರಾಲ್ಡ್ ಡಿ  ಕೋಸ್ಟಾ ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಜಯಂತ್ ನಡುಬೈಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಎ .ಜೆ. ರೈ, ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಪ್ರಶಾಂತ್ ಭಟ್ ಪಿ ಹಾಗೂ ಹಾಗೂ ಪಿಲೋಮಿನಾ ಮೊಂತೇರೋ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರವನ್ ಪೊನ್ನಪ್ಪ ಎಂ ಎನ್, ಕಾರ್ಯದರ್ಶಿ ತನ್ವಿ.ಕೆ ಹಾಗೂ ಜೊತೆ ಕಾರ್ಯದರ್ಶಿ ಪೃಥ್ವಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   


Post a Comment

0 Comments
Post a Comment (0)
Advt Slider:
To Top