ಸುರತ್ಕಲ್ : ಗೋವಿಂದ ದಾಸ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ ಮತ್ತು ಮಾನವಿಕ ವಿಭಾಗ ಹಾಗೂ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ, ತುಳು ಬದುಕು ವಸ್ತು ಸಂಗ್ರಹಾಲಯ ಸಂಚಯಗಿರಿ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ಅರಿವು ಯಾನ ಮಾಲಿಕೆಯಲ್ಲಿ ಗೋವಿಂದ ದಾಸ ಕಾಲೇಜಿನ ಇತಿಹಾಸ ಪ್ರಾಧ್ಯಾಪಕಿ ಡಾ. ವಿಜಯಲಕ್ಷಿö್ಮ ನೇರಳಕೋಡಿ ಅವರ ಕರಾವಳಿಯ ಕಿಲ್ಲೆಗಳು ಸಂಶೋಧನಾ ಕೃತಿಯು ಡಿಸೆಂಬರ್ 9ರಂದು ಮಧ್ಯಾಹ್ನ 2.00 ಗಂಟೆಗೆ ಕಾಲೇಜಿನಲ್ಲಿ ಲೋಕಾರ್ಪಣೆಗೊಳ್ಳಲಿದೆ.
ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ. ಕೃಷ್ಣಮೂರ್ತಿಯವರ ಅಧ್ಯಕ್ಷತೆಯಲ್ಲಿ ವಿವೇಕಾನಂದ ಕಾಲೇಜು ಪುತ್ತೂರು ಇಲ್ಲಿನ ವಿಶ್ರಾಂತ ಪ್ರಾಂಶುಪಾಲ ಹಾಗೂ ಸಂಶೋಧಕ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಕೃತಿ ಬಿಡುಗಡೆಗೊಳಿಸಲಿದ್ದಾರೆ.
ಸುರತ್ಕಲ್ ಹಿಂದೂ ವಿದ್ಯಾದಾಯಿನೀ ಸಂಘದ ಅಧ್ಯಕ್ಷ ಹೆಚ್. ಜಯಚಂದ್ರ ಹತ್ವಾರ್, ಗೋವಿಂದ ದಾಸ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ರಮೇಶ್ ಕುಳಾಯಿ, ಮುಂಬಾಯಿಯ ಉದ್ಯಮಿ ಲೀಲೇಶ್ ಆರ್ ಶೆಟ್ಟಿ, ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ಕಾರ್ಯದರ್ಶಿ ಡಾ. ಆಶಾಲತಾ ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ