ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬರಲಿರುವ ನೂತನ ವರ್ಷಕ್ಕೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದು, ಹೊಸ ವರ್ಷ ಎಲ್ಲರಿಗೂ ಸಮೃದ್ಧಿ, ನೆಮ್ಮದಿ ತರಲೆಂದು ಹಾರೈಸಿದ್ದಾರೆ.
ಈ ಬಗ್ಗೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಅವರು- ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಹೊಸ ಹುರುಪು, ನವ ಚೈತನ್ಯದೊಂದಿಗೆ ಹೊಸ ವರ್ಷವನ್ನು ಸಂಭ್ರಮ- ಸಡಗರದಿಂದ ಸ್ವಾಗತಿಸೋಣ.
ಹವಾಮಾನ ವೈಪರೀತ್ಯ ಹಾಗೂ ಬದಲಾದ ಸನ್ನಿವೇಶದಲ್ಲಿ ಪ್ರಕೃತಿ-ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಆರೋಗ್ಯ ಭಾಗ್ಯ ಕಾಪಾಡುವ ಬಗ್ಗೆ ಎಲ್ಲರೂ ವಿಶೇಷ ಕಾಳಜಿ ವಹಿಸಬೇಕಾದ ಅನಿವಾರ್ಯತೆ ಇದೆ. ದುಃಖ, ದುಮ್ಮಾನಗಳು ದೂರವಾಗಿ ಎಲ್ಲೆಲ್ಲೂ ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ. ಮಾನವೀಯತೆ ಮೆರೆಯಲಿ.
ಎಲ್ಲರೂ ಅವರವರ ಕ್ಷೇತ್ರದಲ್ಲಿ ಉನ್ನತ ಸೇವೆ - ಸಾಧನೆ ಮಾಡುವಂತಾಗಲೆಂದು ಆಶಿಸುತ್ತಾ, ಸರ್ವರಿಗೂ ಹೊಸ ವರ್ಷ ಹರ್ಷದಾಯಕವಾಗಲಿ ಎಂದು ಹಾರೈಸುತ್ತೇನೆ. ಎಲ್ಲರಿಗೂ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ ಎಂದು ಆಶಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ