ಧ.ಗ್ರಾ. ಯೋಜನೆ ಕಲ್ಲಡ್ಕ ಒಕ್ಕೂಟದಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸ್ವಚ್ಛತಾ ಕಾರ್ಯಕ್ರಮ

Upayuktha
0



ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ಒಕ್ಕೂಟದ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ನಿಮಿತ್ತ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಆವರಣದ ಒಳಗೆ ಬೆಳೆದಿರುವ ಹುಲ್ಲು, ಗಿಡ ಗಂಟಿಗಳನ್ನು ಕಡಿದು ಸ್ವಚ್ಚತೆ ಮಾಡಲಾಯಿತು.




ಶಾಲಾ ವಾರ್ಷಿಕೋತ್ಸವ ನಡೆಸುವ ಶಾಲಾ ಅಂಗಲವನ್ನು ಗುಡಿಸಿ ಸ್ವಚ್ಛ ಮಾಡಲಾಯಿತು, ಈ ಕಾರ್ಯಕ್ರಮದಲ್ಲಿ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ, ವಲಯ ಅಧ್ಯಕ್ಷೆ ತುಳಸಿ, ಸೇವಾಪ್ರತಿನಿಧಿಗಳಾದ ಗಣೇಶ್ ನೆಟ್ಲ, ವಿದ್ಯಾ, ಕಲ್ಲಡ್ಕ ಒಕ್ಕೂಟದ ಪ್ರಗತಿ ಬಂದು ಸ್ವ ಸಹಾಯ ಸಂಘದ ಸದಸ್ಯರು ಪಾಲುಗೊಂಡಿದ್ದರು. 



ಕಲ್ಲಡ್ಕ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮಧುಸೂದನ್ ಭಟ್ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದು ಶಾಲಾ ಮುಖ್ಯ ಶಿಕ್ಷಕ ಅಬೂಬಕರ್ ಅಶ್ರಫ್ ಶಾಲಾ ಪರವಾಗಿ ಸ್ವಚ್ಛತಾ ಕಾರ್ಯಕ್ರಮ ಮಾಡಿದ ಯೋಜನೆಯ ಸದಸ್ಯರನ್ನು ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top