ವಾಸಿಸುವ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಂಡಲ್ಲಿ ರೋಗಗಳು ಬರದಂತೆ ತಡೆಗಟ್ಟಬಹುದು: ಖಾದಿರ ಸಾಬ್ ನಧಾಫ್

Upayuktha
0



ಮಂಗಳೂರು:  ಕ್ಷಯರೋಗದ ನಿರ್ಮೂಲನೆಗೆ ಸರಕಾರ ಪಣ ತೊಟ್ಟಿದ್ದು  2025ರ ಒಳಗಾಗಿ ಕ್ಷಯ ಮುಕ್ತ ಸಮಾಜದ ನಿರ್ಮಾಣಕ್ಕೆ ಶ್ರಮಿಸುತ್ತಿದೆ. ಪೋಲಿಯೋ ಮುಕ್ತ ಸಮಾಜ ರೂಪುಗೊಂಡಂತೆ ಕ್ಷಯರೊಗ ಮುಕ್ತ ಸಮಾಜವು ಶೀಘ್ರವಾಗಿ ನಿರ್ಮಾಣವಾಗುತ್ತಿದೆ. ನಾವು ವಾಸಿಸುವ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಂಡಲ್ಲಿ ಅನೇಕ ವಿಧದ ರೋಗಗಳು ಬರದಂತೆ ತಡೆಗಟ್ಟಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಮಂಗಳೂರಿನ ಆರೋಗ್ಯ ಮೇಲ್ವಿಚಾರಕರಾದ ಖಾದಿರ ಸಾಬ್ ನಧಾಫ್ ನುಡಿದರು. 



ಅವರು  ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಕ್ಷಯರೋಗ ನಿರ್ಮೂಲನಾ ಅಭಿಯಾನದಡಿ ಕಾಲೇಜಿನ ಯುವ ರೆಡಕ್ರಾಸ್ ಘಟಕವು ಆಯೋಜಿಸಿದ್ದ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು.  



ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ. ಕೃಷ್ಣಮೂರ್ತಿ ಮಾತನಾಡಿ ಕ್ಷಯರೋಗ ನಿರ್ಮೂಲನಕ್ಕೆ  ಸರಕಾರಗಳು ಕೈಗೊಂಡ ಕಾರ್ಯಕ್ರಮಗಳನ್ನು ಪ್ರೊತ್ಸಾಹಿಸಬೇಕೆಂದರು. 



ಉಪಪ್ರಾಚಾರ್ಯ ಪ್ರೊ. ರಮೇಶ್ ಭಟ್ ಎಸ್.ಜಿ., ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕರಾದ ಪ್ರೊ. ಹರೀಶ ಆಚಾರ್ಯ. ಪಿ.,  ಮತ್ತು ಪ್ರೊ. ನೀಲಪ್ಪ ವಿ., ಯುವ ರೆಡ್ ಕ್ರಾಸ್ ಘಟಕದ ಸಂಯೋಜಕ ಅಶ್ವಿನ್ ಉಪಸ್ಥಿತರಿದ್ದರು. ದಿಯಾ ಸ್ವಾಗತಿಸಿ ಯುವ ರೆಡ್‍ಕ್ರಾಸ್ ಸಂಯೋಜಕಿ ಪೂರ್ಣಿಮಾ ಗೋಖಲೆ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top