ಬೆಳ್ತಂಗಡಿ: ನಡ ಸ. ಪ. ಪೂ ಕಾಲೇಜಿನ ವಿದ್ಯಾರ್ಥಿನಿ ಕು. ಸವಿತಾ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
2023-24 ನೇ ಸಾಲಿನ ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯು ಎಕ್ಸಲೆಂಟ್ ಪ. ಪೂ ಕಾಲೇಜ್ ಮೂಡಬಿದ್ರೆಯಲ್ಲಿ ಇತ್ತೀಚೆಗೆ (ನ.28) ನಡೆಯಿತು.
ನಡ ಕಾಲೇಜಿನ ಸಾಂಸ್ಕೃತಿಕ ನಿರ್ದೇಶಕರಾದ ಶ್ರೀಮತಿ ಲಿಲ್ಲಿ ಪಿ ವಿ ಮತ್ತು ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ ರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಅನೇಕ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಕು.ಸವಿತಾ ದ್ವಿತೀಯ ವಾಣಿಜ್ಯ ವಿಭಾಗ ಇವರು ಜಾನಪದ ಗೀತೆ ಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ