ತೆರಿಗೆ ಪಾವತಿ ಪ್ರತಿ ನಾಗರಿಕನ ಕರ್ತವ್ಯ: ಅಬ್ದುಲ್ ಶರೀಫ್ ಕೆ ಎಂ.

Upayuktha
0



ಮಂಗಳೂರು:  ಆದಾಯ ತೆರಿಗೆ ಪಾವತಿ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ತೆರಿಗೆ ಪಾವತಿ ಎಂಬುದು ನಮ್ಮಲ್ಲೆರ ಸಾಮೂಹಿಕ ಜವಾಬ್ದಾರಿಗಳಲ್ಲಿ ಒಂದಾಗಿದೆ. ಸೂಕ್ತ ಸಮಯದಲ್ಲಿ ತೆರಿಗೆ ಪಾವತಿ ಮಾಡುವುದನ್ನು ತಪ್ಪಿಸಿಕೊಳ್ಳಬಾರದು. ಒಂದು ವೇಳೆ ಹಾಗೆ ಮಾಡಿದರೆ ದಂಡ ತೆರಬೇಕಾಗುತ್ತದೆ ಎಂದು ಆದಾಯ ತೆರಿಗೆ ಅಧಿಕಾರಿ ಅಬ್ದುಲ್ ಶರೀಫ್ ಕೆ ಎಂ. ಜಾಗೃತಿ ಮೂಡಿಸಿದರು.




ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾ ಭವನದಲ್ಲಿ ಆದಾಯ ತೆರಿಗೆ ಇಲಾಖೆ ವತಿಯಿಂದ ಜಾಗೃತಿ ಅಭಿಯಾನ ನಡೆಸಲಾಯಿತು.




ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ಆದಾಯ ತೆರಿಗೆ ಇಲಾಖೆ ವತಿಯಿಂದ ಮೂಲದಲ್ಲಿ ಕಡಿತಗೊಳಿಸಿದ ತೆರಿಗೆ (ಟಿಡಿಎಸ್) ಮತ್ತು ಮೂಲದಲ್ಲಿ ಸಂಗ್ರಹಿಸಲಾದ ತೆರಿಗೆ (ಟಿಸಿಎಸ್) ಸಂಬಂಧಿಸಿದ ನಿಬಂಧನೆ ಕುರಿತಂತೆ ಕೇಂದ್ರೀಕೃತ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಿದೆ ಎಂದು ಮಾಹಿತಿ ನೀಡಿದರು. 




ಟಿಡಿಎಸ್ ಮತ್ತು ಟಿಸಿಎಸ್ ಅಡಿ ಬರುವ ವಿವಿಧ ಅಂಶಗಳ ಬಗ್ಗೆ ವಿವರಣೆ ನೀಡಿದರು. ಇದೇ ವೇಳೆ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಹಾಗೂ ತೆರಿಗೆ ಇಲಾಖೆ ಅಧಿಕಾರಿಗಳಾದ ಭಾಸ್ಕರ್ ಮತ್ತು ಪರ್ವೀನ್ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಶಹಲಾ ನಿರೂಪಿಸಿ, ಕಚೇರಿ ಅಧೀಕ್ಷಕಿ ಭಾಗ್ಯಲಕ್ಷ್ಮಿ ವಂದಿಸಿದರು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   


Post a Comment

0 Comments
Post a Comment (0)
To Top