ಮಂಗಳೂರು: ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುವಂತೆ ಭಾಷಣ ಮಾಡಿದ್ದಾರೆಂದು ಡಾ| ಪ್ರಭಾಕರ ಭಟ್ ಅವರ ವಿರುದ್ಧ ಕೇಸು ದಾಖಲಿಸಿರುವುದನ್ನು ದ.ಕ.ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡಿಸಿದ್ದಾರೆ.
ತ್ರಿವಳಿ ತಲಾಖ್ ಎನ್ನುವ ಪದ್ದತಿಯಿಂದ ಮುಸ್ಲಿಂ ಮಹಿಳೆಯರ ಬಾಳು ಹಾಳಾದಾಗ ಮಾತನಾಡದವರು ಇವತ್ತು ಮಹಿಳೆಯರ ಬಗ್ಗೆ ಮಾತನಾಡುತ್ತಿರುವುದು ವಿಪರ್ಯಾಸ. ನರೇಂದ್ರ ಮೋದಿ ಸರ್ಕಾರ ತ್ರಿವಳಿ ತಲಾಖ್ ನಿಷೇಧಿಸಿದ್ದರಿಂದ ಮುಸ್ಲಿಂ ಮಹಿಳೆಯರಿಗೆ ಸಮಾಜದಲ್ಲಿ ಸಮಾನತೆ ದೊರೆತಿದೆ ಎಂದು ಡಾ| ಪ್ರಭಾಕರ ಭಟ್ ಭಾಷಣದ ತಾತ್ಪರ್ಯ. ಆದರೆ ಕಾಂಗ್ರೆಸ್ ಅಧಿಕಾರ ಬಂದಾಗಲೆಲ್ಲಾ ಹಿಂದು ಕಾರ್ಯಕರ್ತರನ್ನು, ಪ್ರಮುಖರನ್ನು ಟಾರ್ಗೆಟ್ ಮಾಡುತ್ತಿರುವುದು ಖಂಡನೀಯ ಎಂದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ