
ಮಂಗಳೂರು: ತಲಪಾಡಿಯ ಶ್ರೀಕೃಷ್ಣ ಭಜನಾ ಮಂದಿರದ 64ನೇ ವಾರ್ಷಿಕೋತ್ಸವ ಪ್ರಯುಕ್ತ ಸಾರ್ವಜನಿಕರಿಗೆ ಉಚಿತ ಅರೋಗ್ಯ ವೈದ್ಯಕೀಯ ತಪಾಸಣಾ ಶಿಬಿರವನ್ನು ಡಿ.3 ರಂದು ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ, ಕೃಷ್ಣ ನಗರ, ಕೆ.ಸಿ ರೋಡು ಇಲ್ಲಿ ಏರ್ಪಡಿಸಲಾಗಿದೆ.
ನಗರದ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಲಕ್ಷ್ಮಿ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ಮಂಗಳೂರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಇದರ ನೇತೃತ್ವದಲ್ಲಿ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ (ಜನರಲ್ ಚಿಕಿತ್ಸೆ)
• ಕಿವಿ ಮೂಗು ಗಂಟಲು ತಪಾಸಣೆ
• ಚರ್ಮರೋಗ ತಪಾಸಣೆ, ಕಣ್ಣಿನ ತಪಾಸಣೆ (ವೈದ್ಯರ ಶಿಫಾರಸ್ಸಿನ ಮೇರೆಗೆ ಕನ್ನಡಕವನ್ನು ಸಹ ಉಚಿತವಾಗಿ ನೀಡಲಾಗುವುದು)
• ಮಧುಮೇಹ ಮತ್ತು ರಕ್ತದ ಒತ್ತಡ ಪರೀಕ್ಷೆ ಹೃದಯ ಸಂಬಂಧಿ ರೋಗ ತಪಾಸಣೆ (ECG)
• ಕಣ್ಣಿನ ಪೊರೆಯನ್ನು ನಿರ್ಮೂಲನೆ ಮಾಡುವ ವ್ಯವಸ್ಥೆಯನ್ನು ಕೂಡ ಮಾಡಿಕೊಡಲಾಗುವುದು.
ಈ ಸೌಲಭ್ಯಗಳು ಬಿ.ಪಿ.ಎಲ್ ಕಾರ್ಡ್‌ದಾರರಿಗೆ ಮಾತ್ರ ಅನ್ವಯವಾಗುವುದು. ಪರಿಸರದ ನಾಗರಿಕರು ಶಿಬಿರದ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀ ಕೃಷ್ಣ ಭಜನಾ ಮಂದಿರ ಮತ್ತು ಶ್ರೀ ಕೃಷ್ಣ ಕ್ರಿಕೆಟರ್ಸ್ (ಲಿ.) ಕೃಷ್ಣನಗರ, ಜೆ.ಪಿ. ರೋಡು, ತಲಪಾಡಿ, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ: 9480265943 / 9902270682
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ