ವಿಜಯಪುರ: ಕಮತಗಿಯ ಶ್ರೀ ಹುಚ್ಚೇಶ್ವರ ಪ್ರೌಢಶಾಲೆಯಲ್ಲಿ 31ನೆಯ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ ಜರುಗಿತು. ಜಿಲ್ಲಾಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ‘ವೈಜ್ಞಾನಿಕ ಸಂಶೋಧನಾ’ ಪ್ರಬಂಧಗಳ ವಿಷಯ ಮಂಡನೆ ನಡೆಯಿತು.
ಶಿರೂರು ಪಟ್ಟಣದ ಶ್ರೀ ಸಿದ್ದೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಸಹನಾ ಕೊಣ್ಣೂರ ಹಾಗೂ ರೇಣುಕಾ ಹಿರೇಕುಂಬಿ ಮತ್ತು ಕುಮಾರಿ ಶ್ರೇಯಾ ಬಾರಡ್ಡಿ ಮತ್ತು ಕುಮಾರಿ ನವ್ಯ ಕಾಮರಡ್ಡಿ ಇವರು ‘ಸಿರಿಧಾನ್ಯಗಳು ಅದ್ಭುತ ಆಹಾರ ಹಾಗೂ ಹಲಸಿನ ಆನ ಮಧುಮೇಹಕ್ಕೆ ಬಾಣ’ ಎಂಬ ಎರಡು ಪ್ರಬಂಧಗಳನ್ನು ಮಂಡಿಸಿ ಕೊಪ್ಪಳದಲ್ಲಿ ಜರುಗಲಿರುವ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯಧ್ಯಾಪಕಿ ಶ್ರೀಮತಿ ಎಲ್ ಟಿ, ಪೂಜಾರ್ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಬೆಂಗಳೂರು ಜಿಲ್ಲಾ ಸಮಿತಿ ಬಾಗಲಕೋಟೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಬಾಗಲಕೋಟೆ ಇವರ ಸಹಯೋಗದಲ್ಲಿ ನಡೆದ ಈ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಈ ವಿದ್ಯಾರ್ಥಿಗಳು ಭಾಗಿಯಾಗಿ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಆಯ್ಕೆಗೊಂಡು ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಇವರಿಗೆ ಮಾರ್ಗದರ್ಶನ ಮಾಡಿದ ವಿಜ್ಞಾನ ಶಿಕ್ಷಕರಾದ ಸಂಜಯ್ ನಡುವಿನಮನಿ ಅವರನ್ನು ಹಾಗೂ ವಿದ್ಯಾರ್ಥಿನಿಯರನ್ನು ಶ್ರೀ ಸಿದ್ದೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪೂಜ್ಯಶ್ರೀ ಮರಿಮಹಾಂತ್ ಚನ್ನವೀರ ದೇವರು ಹಾಗೂ ಆಡಳಿತ ಮಂಡಳಿಯವರು ಹಾಗೂ ಪ್ರೌಢಶಾಲೆಯ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ ಎಂದು ಮುಖ್ಯೋಪಾಧ್ಯಾಯರಾದ ಶ್ರೀಮತಿ ಐ ಖಿ ಪೂಜಾರ್ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ