ಎ.ಎಸ್. ಹರ್ಷಿತಾ ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆಗೆ ಆಯ್ಕೆ

Upayuktha
0


ಹಾಸನ: ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಹಾಸನ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣ ಇಲ್ಲಿ ನಡೆದ 2023- 24ನೇ ಸಾಲಿನ ಜಿಲ್ಲಾಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರಧಾನ) ಪ್ರೌಢಶಾಲಾ ವಿಭಾಗ, ಗಂಧದ ಕೋಠಿ ಆವರಣ ಆರ್‌.ಸಿ. ರಸ್ತೆ ಹಾಸನ, ಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಕು. ಎ.ಎಸ್ ಹರ್ಷಿತಾ. ರವರು ಜಿಲ್ಲಾ ಮಟ್ಟದಲ್ಲಿ ಸ್ಪರ್ಧಿಸಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆಗೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿರುತ್ತಾರೆ. ಇವರಿಗೆ ಶಾಲೆಯ ಉಪಪ್ರಾಂಶುಪಾಲರಾದ ಮಂಜುನಾಥ್ ಹಾಗೂ ಮಾರ್ಗದರ್ಶಿ ಶಿಕ್ಷಕರಾದ ಕೆ.ಎನ್. ಚಿದಾನಂದ ಹಾಗೂ ಎಲ್ಲಾ ಸಹ ಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು, ಸಿಬ್ಬಂದಿಗಳು, ಪೋಷಕರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಅಭಿನಂದಿಸಿರುತ್ತಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top