ಕ್ರೀಡೆಯಿಂದ ಪೀಡೆ ತೊಲಗುತ್ತದೆ: ಡಾ|| ಚೂಂತಾರು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟ 2023 ಇದರ ಉದ್ಘಾಟನಾ ಸಮಾರಂಭ ಇಂದು (ಡಿ.14) ಗುರುವಾರದಂದು ಮೇರಿಹಿಲ್‍ನ ಜಿಲ್ಲಾ ಗೃಹರಕ್ಷಕದಳದ ಕಛೇರಿ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದ ಅತಿಥಿಗಳಾಗಿ ಆಗಮಿಸಿದ ತ್ರಿಜೇಶ್ ಗಟ್ಟಿ, ರಾಜ್ಯಮಟ್ಟದ ದೇಹದಾರ್ಢ್ಯ ಪಟು ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು ಹಾಗೂ ಗೃಹರಕ್ಷಕರ ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು ಎಲ್ಲಾ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರಿಗೆ ದೈಹಿಕ ಕ್ಷಮತೆ ಅತೀ ಅಗತ್ಯ ಈ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಅತೀ ಅವಶ್ಯಕ, ಉತ್ತಮ ಆಹಾರ ಸೇವನೆಯಿಂದ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಇಂತಹ ಕ್ರೀಡಾಕೂಟಗಳಿಂದ ಮಾನಸಿಕ ಒತ್ತಡ ಕಡಿಮೆ ಆಗಿ ಮಾನಸಿಕ ಆರೋಗ್ಯ ವೃದ್ದಿಸುತ್ತದೆ ಎಂದು ನುಡಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಮಾತನಾಡಿ, ಆಟದಲ್ಲಿ ಸೋಲು-ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು. ಯಾವುದೇ ವೃತ್ತಿ ಅಥವಾ ಯಾವುದೇ ಕೆಲಸ ಮಾಡುವಾಗ ನಮ್ಮ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತೀ ಅವಶ್ಯಕ. ಆರೋಗ್ಯವನ್ನು ಕಾಪಾಡಿಕೊಳ್ಳಲು ನಿರಂತರವಾದ ದೈಹಿಕ ಚಟುವಟಿಕೆಗಳು ಪೂರಕವಾದಂತಹ ಕ್ರೀಡಾಕೂಟಗಳು ಅಗತ್ಯ ಎಂದು ನುಡಿದರು. ಕ್ರೀಡೆಯಿಂದ ಪೀಡೆ ತೊಲಗುತ್ತದೆ ಹಾಗೂ ವ್ಯಕ್ತಿ ಆರೋಗ್ಯವಂತನಾಗುತ್ತಾನೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಗೋಪಿನಾಥ್ ಎಂ.ಎನ್. ಕಛೇರಿ ಅಧೀಕ್ಷಕರು, ಮಂಗಳೂರು ಘಟಕದ ಘಟಕಾಧಿಕಾರಿ ಮಾರ್ಕ್ ಶೇರಾ, ಜಿಲ್ಲಾ ಗೃಹರಕ್ಷಕ ದಳದ 55 ಮಂದಿ ಗೃಹರಕ್ಷಕ/ ಗೃಹರಕ್ಷಕಿಯರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ