ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳೆರಡೂ ಮಹತ್ವ: ಡಾ. ಅನಸೂಯ ರೈ

Upayuktha
0

 ವಿವಿ ಕಾಲೇಜು: ನವೋತ್ಸವ–2023



ಮಂಗಳೂರು:  ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಕಲಿಕೆ ಜೊತೆಗೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಮಾರುಕಟ್ಟೆಗೆ ಸೂಕ್ತವಾದ ವೃತ್ತಿ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳೆರಡೂ ಮಹತ್ವದಾಗಿದ್ದು, ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿರುತ್ತವೆ ಎಂದು ಪ್ರಾಂಶುಪಾಲೆ ಡಾ. ಅನಸೂಯ ರೈ ಹೇಳಿದರು.




ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಎಂ.ಕಾಂ. ವಿಭಾಗದ ವತಿಯಿಂದ ನೂತನ ವಿದ್ಯಾರ್ಥಿಗಳಿಗೆ ‘ನವೋತ್ಸವ–2023’ ಎಂಬ ಪರಿಚಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಹಿರಿಯ ಪ್ರಾಧ್ಯಾಪಕಿ ಪ್ರೊ. ಸುಭಾಷಿಣಿ ಶ್ರೀವತ್ಸ ಮಾತನಾಡಿ, ಕಾಲೇಜಿನಲ್ಲಿರುವ ಸಂಪನ್ಮೂಲಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡಲ್ಲಿ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಮೂಲಕ ಉನ್ನತ ಸ್ಥಾನಕೇರಲು ಸಾಧ್ಯವಾಗುತ್ತದೆ ಎಂದರು. 




ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಪ್ರೊ. ಎ. ಸಿದ್ಧಿಕ್, ವಿದ್ಯಾರ್ಥಿಗಳು ಕೇವಲ ಪಠ್ಯ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗದೆ, ವೃತ್ತಿ ಕೌಶಲ್ಯಗಳನ್ನು ಕೂಡಾ ಮೈಗೂಡಿಸಿಕೊಳ್ಳಬೇಕು. ಉತ್ತಮ ಸಂವಹನ, ಆತ್ಮವಿಶ್ವಾಸ, ನಾಯಕತ್ವ ಗುಣಗಳು, ಸಂಶೋಧನಾ ಆಸಕ್ತಿ ಎಲ್ಲವೂ ಉತ್ತಮ ಉದ್ಯೋಗಕ್ಕೆ ರಹದಾರಿ ಎಂದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top