ತೆಂಕನಿಡಿಯೂರು ಕಾಲೇಜಿನಲ್ಲಿ ಸಮಾಜಕಾರ್ಯ ವೇದಿಕೆ “ಅಭ್ಯುದಯ” ಉದ್ಘಾಟನೆ

Upayuktha
0



ತೆಂಕನಿಡಿಯೂರು : ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇದರ ಸಮಾಜಕಾರ್ಯ ವಿಭಾಗದ “ಸಮಾಜಕಾರ್ಯ ವೇದಿಕೆ 2023-24 “ಅಭ್ಯುದಯ” ವನ್ನು ಬ್ರಹ್ಮಾವರ ರುಡ್‍ಸೆಟ್ ಸಂಸ್ಥೆಯ ಹಿರಿಯ ಅಧಿಕಾರಿಗಳಾದ ಶ್ರೀ ಕರುಣಾಕರ ಜೈನ್ ಉದ್ಘಾಟಿಸಿದರು.  




ಅವರು ಗ್ರಾಮೀಣಾಭಿವೃದ್ಧಿಯಲ್ಲಿ ಯುವ ಜನರ ಪಾತ್ರ ಎಂಬ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ವಿವಿಧ ಕೌಶಲ್ಯಗಳ ಕುರಿತು ಮಾರ್ಗದರ್ಶನ ನೀಡಿದರು.  ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.  




ಶೈಕ್ಷಣಿಕ ಸಲಹೆಗಾರರಾದ ಡಾ. ಪ್ರಸಾದ್ ರಾವ್ ಎಂ. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಡಾ. ರಾಘವ ನಾಯ್ಕ, ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ಸಮಾಜಕಾರ್ಯ ಸ್ನಾತಕೋತ್ತರ ವಿಭಾಗ ಮುಖ್ಯಸ್ಥ ಡಾ. ದುಗ್ಗಪ್ಪ ಕಜೆಕಾರ್ ಉಪಸ್ಥಿತರಿದ್ದರು.  




ವಿಭಾಗದ ಉನ್ಯಾಸಕಿ ಡಾ. ಪ್ರಮೀಳಾ ಜೆ. ವಾಸ್ ಸಮಾಜಕಾರ್ಯ ವೇದಿಕೆಯ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.  ವೇದಿಕೆಯ ಅಧ್ಯಕ್ಷ ಸಂದೇಶ್ ಜಿ. ಅಂಬಿಗ್ ಈ ಸಾಲಿನ ಕ್ರಿಯಾ ಯೋಜನೆಯನ್ನು ವಿವರಿಸಿದರು.  ದ್ವಿತೀಯ ಎಂ.ಎಸ್.ಡಬ್ಲ್ಯೂ. ವಿಜೇತ್ ಕಾರ್ಯಕ್ರಮ ನಿರೂಪಿಸಿ, ಬಿ.ಎಸ್.ಡಬ್ಲ್ಯೂ. ಗೌತಮಿ ಸ್ವಾಗತಿಸಿದರು. ಪ್ರಥಮ ಎಂ.ಎಸ್.ಡಬ್ಲ್ಯೂ. ಶಿವಾನಿ ವಂದಿಸಿದರು. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter


Post a Comment

0 Comments
Post a Comment (0)
Advt Slider:
To Top