ಉಡುಪಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ 2023-24ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನ ವೇದಿಕೆಯನ್ನು ಲಯನ್ಸ್ ಕ್ಲಬ್ ಅಮೃತ್ ಉಡುಪಿ ಇವರ ಸಹಯೋಗದಲ್ಲಿ ಅಂಬಾಗಿಲಿನ ಅಮೃತ್ ಗಾರ್ಡನ್‍ನಲ್ಲಿ ಉದ್ಘಾಟಿಸಲಾಯಿತು.
ಉದ್ಘಾಟನೆಯನ್ನು ನಡೆಸಿದ ಉಡುಪಿ ಶಾಸಕರಾದ ಯಶ್‍ಪಾಲ್ ಎ. ಸುವರ್ಣ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಈಗಾಗಲೇ ಶಿಕ್ಷಣ, ಆರೋಗ್ಯ, ಸಾಂಸ್ಕøತಿಕ, ಕ್ರೀಡಾ ಕ್ಷೇತ್ರಗಳಲ್ಲಿ ಆಗಾಧ ಸಾಧನೆಯನ್ನು ಮಾಡಿ ದೇಶ-ವಿದೇಶಗಳಲ್ಲಿ ಛಾಪು ಮೂಡಿಸಿರುವ ಉಡುಪಿ ಜಿಲ್ಲೆ ಭಾರತೀಯ ನಾಗರೀಕ ಸೇವೆಯಂತಹ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ನಮ್ಮ ಜಿಲ್ಲೆಯ ಪ್ರತಿಭಾನ್ವಿತ ಯುವಜನತೆ ಆಸಕ್ತಿ ವಹಿಸಬೇಕಾಗಿದೆ. ಇದಕ್ಕೆ ಬೇಕಾದ ಸಕಲ ಪ್ರೋತ್ಸಾಹವನ್ನು ನೀಡುವ ಭರವಸೆಯನ್ನು ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಗೋಪಾಲಕೃಷ್ಣ ಎಂ ಗಾಂವಕರ್ ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಉದ್ಯೋಗ ಮಾರುಕಟ್ಟೆಯಲ್ಲಿ ಯಶಸ್ಸು ಗಳಿಸಲು ಬೇಕಾದ ಕೌಶಲಗಳನ್ನು ವಿದ್ಯಾರ್ಥಿಗಳು ಬೆಳಸಿಕೊಳ್ಳಬೇಕೆಂದು ಸಲಹೆಯಿತ್ತರು.
ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ಉಡುಪಿ ಅಮೃತ್ ಅಧ್ಯಕ್ಷರಾದ ಶ್ರೀಮತಿ ಭಾರತಿ ಹೆಚ್.ಎಸ್, ಉದ್ಯಮಿಗಳಾದ ಎಂ.ಸಿ ಚಂದ್ರಶೇಖರ್ ಶುಭ ಹಾರೈಸಿದರು. ಪ್ರಾಂಶುಪಾಲರಾದ ಪ್ರೊ.ಸುರೇಶ್ ರೈ.ಕೆ ಕಳೆದ ಮೂರು ದಶಕಗಳಲ್ಲಿ ತೆಂಕನಿಡಿಯೂರು ಕಾಲೇಜು ಬೆಳೆದು ಬಂದ ಹಾದಿಯನ್ನು ಶೈಕ್ಷಣಿಕ, ಕ್ರೀಡೆ, ಹಾಗೂ ಸಾಂಸ್ಕøತಿಕ ಕ್ಷೇತ್ರಗಳ ಸಾಧನೆಯನ್ನು ಸ್ಥೂಲವಾಗಿ ಪರಿಚಯಿಸಿ ಅತಿಥಿಗಳನ್ನು ಸ್ವಾಗತಿಸಿದರು. ಶೈಕ್ಷಣಿಕ ಸಲಹೆಗಾರರಾದ ಡಾ. ಪ್ರಸಾದ್ ರಾವ್ ಎಂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಶ್ರೀ ರಾಧಕೃಷ್ಣ, ಡಾ. ರಾಘವ ನಾಯ್ಕ್ , ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ಸಾಂಸ್ಕøತಿಕ ಸಮಿತಿ ಸಂಚಾಲಕರಾದ ಕೃಷ್ಣ ಸಾಸ್ತಾನ, ಶ್ರೀಮತಿ ರತ್ನಮಾಲಾ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ವಿದ್ಯಾರ್ಥಿ ಪ್ರತಿನಿಧಿಗಳಾದ ನಿಶಾ, ಸುಪ್ರೀತಾ, ಯಶೋಧ, ನಿಸಾರ್ ಅಹಮ್ಮದ್, ಸಂಧ್ಯಾ, ಅಭಿಷೇಕ್ ಮತ್ತಿತ್ತರು ಉಪಸ್ಥಿತರಿದ್ದರು. ನಿಶಾ ವಂದನಾರ್ಪಣೆಗೈದರೆ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗ ಮುಖ್ಯಸ್ಥ ಡಾ. ದುಗ್ಗಪ್ಪ ಕಜೆಕಾರ್ ಕಾರ್ಯಕ್ರಮ ನಿರ್ವಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ