ಶೈಕ್ಷಣಿಕ ಅಭಿವೃದ್ಧಿಗೆ ಕೈಗಾರಿಕಾ, ಸಾಮಾಜಿಕ ಸೇವಾ ಸಂಸ್ಥೆಗಳ ಕೊಡುಗೆ ಶ್ಲಾಘನೀಯ: ಉದಯ ಭಾಸ್ಕರ್ ವೈ.ವಿ

Upayuktha
0



ಸುರತ್ಕಲ್ : ವಿದ್ಯಾರ್ಥಿಗಳು ಕಲಿಕಾಸಕ್ತಿ , ಸತತ ಪರಿಶ್ರಮ ಮತ್ತು ಅಧ್ಯಯನ ಶೀಲತೆಯಿಂದ ನಿಶ್ಚಿತ ಗುರಿ ತಲುಪಲು ಸಾಧ್ಯ. ಕೈಗಾರಿಕಾ ಹಾಗೂ ಸಾಮಾಜಿಕ ಸೇವಾ ಸಂಸ್ಥೆಗಳು ಶೈಕ್ಷಣಿಕ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಬಂಧಕ ಉದಯ ಭಾಸ್ಕರ್ ವೈ.ವಿ. ನುಡಿದರು. 




ಅವರು ಅವಶ್ಯ ಫೌಂಡೇಶನ್ ಮತ್ತು ಆಲ್‍ಕಾರ್ಗೋ ಲಾಜಿಸ್ಟಿಕ್ ಸಂಸ್ಥೆಯು ಕೊಡಮಾಡುತ್ತಿರುವ ವಿದ್ಯಾರ್ಥಿ ವೇತನವನ್ನು ಸುರತ್ಕಲ್ ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡುತ್ತಿದ್ದರು.




ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಕೃಷ್ಣಮೂರ್ತಿ ಪಿ., ಮಾತನಾಡಿ ವಿದ್ಯಾರ್ಥಿಗಳು ಆರ್ಥಿಕ ಕೊಡುಗೆ ನೀಡುವ ದಾನಿಗಗಳಿಗೆ ಕೃತಜ್ಞರಾಗಿರಬೇಕಾಗಿದ್ದು ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದರು.




ಕಾಲೇಜಿನ ಉಪಪ್ರಾಂಶುಪಾಲ ಪ್ರೊ. ರಮೇಶ್ ಭಟ್ ಎಸ್.ಜಿ ಸ್ವಾಗತಿಸಿದರು. ಪ್ರಾಧ್ಯಾಪಕರಾದ ಪ್ರೊ. ವಾಮನ ಕಾಮತ್, ಡಾ. ಸೌಮ್ಯ ಪ್ರವೀಣ್, ಡಾ ಆಶಾ, ಡಾ. ಭಾಗ್ಯಲಕ್ಷೀ, ಶ್ರೀದೇವಿ, ಕುಮಾರ್ ಮಾದರ, ಡಾ. ಪ್ರಶಾಂತ ಎಂ.ಡಿ., ಡಾ. ಸುಜಾತ ಮತ್ತಿತರರು ಉಪಸ್ಥಿತರಿದ್ದರು.



ಪದವಿ ಹಾಗೂ ಸ್ನಾತಕೋತ್ತರ ಪದವಿಯ 35 ವಿದ್ಯಾರ್ಥಿಗಳಿಗೆ ರೂ. 1,68,000 ಮೊತ್ತದ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   



Post a Comment

0 Comments
Post a Comment (0)
To Top