ಧರ್ಮಸ್ಥಳ: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ವತಿಯಿಂದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಜ.5 ರಿಂದ ನಡೆಯಲಿರುವ ಕ್ಯಾ. ಪ್ರಾಂಜಲ್ ಗೌರವಾರ್ಥ 'ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿಯ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ,' ರಾಜ್ಯಸಭಾ ಸದಸ್ಯ, ಶ್ರೀ ಡಿ. ವೀರೇಂದ್ರ ಹೆಗ್ಗಡೆ ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ, ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪಂದ್ಯಾವಳಿಯ ಪ್ರಧಾನ ಸಂಚಾಲಕ ಅನ್ನು ಮಂಗಳೂರು, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಹಿರಿಯ ಪತ್ರಕರ್ತರಾದ ಕೇಶವ ಕುಂದರ್, ಆರ್.ಎನ್. ಪೂವಣಿ, ಝೀ ಕನ್ನಡ ಡ್ರಾಮ ಜ್ಯೂನಿಯರ್ ಖ್ಯಾತಿಯ ರಿಷಿಕಾ ಕುಂದೇಶ್ವರ ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ