ಡಿ.23ರಂದು ಅಂತರ ವೈದ್ಯಕೀಯ ಕಾಲೇಜು ವೈದ್ಯಕೀಯ ರಸ ಪ್ರಶ್ನೆ ಸ್ಪರ್ಧೆ

Upayuktha
0

ಕಿಮ್ಸ್ ಪಿ.ಜಿ. ಮೆಡಿಕ್ವಿಜ್ - 2023




ಮಂಗಳೂರು: ನಗರದ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸ್ನಾತಕೋತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ 3ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸ ಪ್ರಶ್ನೆ  ಕಿಮ್ಸ್ ಪಿ.ಜಿ. ಮೆಡಿಕ್ವಿಜ್ - 2023 ಸ್ಪರ್ಧಾಕೂಟವನ್ನು ಶನಿವಾರ ಡಿ.23ರಂದು ರಂದು ಬೆ.10 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ. 


ಕರ್ನಾಟಕ ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ವೈದ್ಯಕೀಯ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಂಶುಪಾಲರು ತಮ್ಮ ಕಾಲೇಜಿನ ವೈದ್ಯಕೀಯ ಶಾಸ್ತ್ರ ವಿಭಾಗದ ಸ್ನಾತಕೋತರ ವೈದ್ಯಕೀಯ ವಿದ್ಯಾರ್ಥಿಗಳನ್ನು ಒಳಗೊಂಡ ತಂಡದ ಹೆಸರುಗಳನ್ನು ಸ್ಪರ್ಧಾಕೂಟದಲ್ಲಿ ಭಾಗವಹಿಸಲು ನೋಂದಾಯಿಸಬಹುದು. ಈ ಸ್ಪರ್ಧಾ ಕೂಟವು ಕೇವಲ ಆಂತರಿಕ ವೈದ್ಯಕೀಯ ಶಾಸ್ತ್ರ ವಿಷಯದ ಬಗ್ಗೆ ಸೀಮಿತ ಗೊಂಡಿದೆ. 


ಕಣಚೂರು ವೈದ್ಯಕೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹಾಜಿ ಯು.ಕೆ. ಮೋನು ಯವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಸ್ಪರ್ಧಾ ವಿಜೇತರಿಗೆ ಆಕರ್ಷಕ ಪ್ರಶಸ್ತಿ, ಬಹುಮಾನ ಹಾಗೂ ಪ್ರಶಸ್ತಿ ಪ್ರಮಾಣ ಪತ್ರವನ್ನು ಪ್ರಧಾನ ಮಾಡಲಿರುವರು. ಕಾರ್ಯನಿರ್ವಾಹಕ ನಿರ್ದೇಶಕ ಅಬ್ದುಲ್ ರೆಹಮಾನ್, ಪ್ರಾಂಶುಪಾಲರಾದ ಪ್ರೋ. ಡಾ. ರತ್ನಾಕರ ಯು.ಪಿ. ವೈದ್ಯಕೀಯ ಅಧೀಕ್ಷಕರಾದ ಪ್ರೊ. ಡಾ. ಹರೀಶ್ ಶೆಟ್ಟಿ, ಮುಖ್ಯ ಆಡಳಿತ ಅಧಿಕಾರಿಯಾದ ಡಾ. ರೋಹನ್ ಮೋನಿಸ್ ಮತ್ತು  ಕಣಚೂರು ಆರೋಗ್ಯ ವಿಜ್ಞಾನ ಸಂಸ್ಥೆ ಸಮಿತಿಯ ಅಧ್ಯಕ್ಷರಾದ ಪ್ರೊ. ಡಾ. ಮೊಹಮ್ಮದ್ ಇಸ್ಮಾಯಿಲ್ ಹಾಗೂ ಸದಸ್ಯರಾದ ಪ್ರೋ ಡಾ. ಎಂ.ವಿ. ಪ್ರಭು ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿರುವರು. 

ಹೆಚ್ಚಿನ ಮಾಹಿತಿ/ವಿವರಗಳಿಗಾಗಿ ಸ್ಪರ್ಧಾ ಕೂಟದ ಸಂಘಟಕರಾದ ಹಾಗೂ ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ದೇವದಾಸ್ ರೈ 9845081145, ಇವರನ್ನು ಸಂಪರ್ಕಿಸಬಹುದು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top