ಕ್ರಿಸ್ ಮಸ್ ರಜೆ: KSRTCಯಿಂದ ಒಂದು ಸಾವಿರ ಹೆಚ್ಚುವರಿ ಬಸ್

Upayuktha
0


ಬೆಂಗಳೂರು: ಡಿಸೆಂಬರ್ 22 ಮತ್ತ 23 ವಾರಾಂತ್ಯ ದಿನಗಳು ಹಾಗೂ ಡಿಸೆಂಬರ್ 25 ರಂದು ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಕೆಎಸ್ ಆರ್ ಟಿಸಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಡಿ.22 ರಿಂದ 24 ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ 1000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.


ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ಗೆ ಬಸ್ ತೆರಳಲಿವೆ.


ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿಗೆ ಹೆಚ್ಚುವರಿ ಬಸ್ ಹೊರಡಲಿವೆ.


ಶಾಂತಿನಗರದ ಬಸ್ ನಿಲ್ದಾಣದಿಂದ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್, ವಿಜಯವಾಡ, ಹೈದರಾಬಾದ್ ಸೇರಿದಂತೆ ತಮಿಳುನಾಡು ಹಾಗೂ ಆಂಧ್ರಪ್ರದೇಶ, ತೆಲಂಗಾಣಕ್ಕೆ ಬಸ್ಗಳು ತೆರಳಿವೆ.

ಡಿ.25ರಂದು ಮತ್ತಷ್ಟು ವಿಶೇಷ ಬಸ್‌ಗಳು ಸಂಚರಿಸಲಿವೆ. ಸಂಸ್ಥೆಯ ವೆಬ್ಸೈಟ್ www.ksrtc.karnataka.gov.in ಮೂಲಕ ಆಸನಗಳನ್ನು ಕಾಯ್ದಿರಿಸಬಹುದು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top