'ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ 2024 ಕ್ರಿಕೆಟ್ ಪಂದ್ಯಾವಳಿ' ಪೋಸ್ಟರ್ ಬಿಡುಗಡೆ

Upayuktha
0




ಮಂಗಳೂರು: ಕ್ಯಾ.ಪ್ರಾಂಜಲ್ ಗೌರವಾರ್ಥ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯುವ 'ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿ' 2024ರ ಪೋಸ್ಟರ್ ನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಬುಧವಾರ ಕಚೇರಿಯ ಆವರಣದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.



ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪಂದ್ಯಾವಳಿಯ ಪ್ರಧಾನ ಸಂಚಾಲಕ ಅನ್ನು ಮಂಗಳೂರು, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕಾರ್ಯಕಾರಿ ಸಮಿತಿ ಸದಸ್ಯರಾದ ರಾಜೇಶ್ ದಡ್ಡಂಗಡಿ ಮೊದಲಾದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Advt Slider:
To Top