ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಕ್ರೀಡಾಕೂಟಕ್ಕೆ ವಿವೇಕಾನಂದ ಕಾಲೇಜಿನ ಕೀರ್ತಿರಾಜ್.ಕೆ.ಎಸ್ ಆಯ್ಕೆ

Upayuktha
0



ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಕೀರ್ತಿರಾಜ್.ಕೆ.ಎಸ್ ಜಾವೆಲಿನ್ ಥ್ರೋ ವಿಭಾಗದಲ್ಲಿ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಪುರುಷರ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.



ಇವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಡಿಸೆಂಬರ್ 29 ರಿಂದ ಜನವರಿ 1ರವರೆಗೆ ತಮಿಳ್ನಾಡು ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಶ್ವವಿದ್ಯಾನಿಲಯ ಚೆನ್ನೈ ಇದರ ಆಶ್ರಯದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಇವರು ಪ್ರತಿನಿಧಿಸಲಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   




Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top