ಕಾಸರಗೋಡು: ಜಿಲ್ಲೆಯ ಪುರಾಣ ಪ್ರಸಿದ್ಧ ದೇವಸ್ಥಾನವಾದ ಕುಮಾರಮಂಗಲ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರ ಸನ್ನಿಧಿಯಲ್ಲಿ ದಿನಾಂಕ ಡಿ.18 ಸೋಮವಾರದಂದು ಷಷ್ಠಿ ಮಹೋತ್ಸವವು ಅತ್ಯಂತ ಭಕ್ತಿ ಶ್ರದ್ಧೆಯಿಂದ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಬಹಳ ವಿಜೃಂಭಣೆಯಿಂದ ಜರುಗಲಿರುವುದು. ಈ ಮಹೋತ್ಸವದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 10.00 ಘಂಟೆಯಿಂದ ದೇವಸ್ಥಾನ ಮಯೂರ ಮಂಟಪದಲ್ಲಿ ಡಾ. ವಾಣಿಶ್ರೀ ಕಾಸರಗೋಡು ನೇತೃತ್ವದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ.) ಕಾಸರಗೋಡು ಸಂಸ್ಥೆಯ ವತಿಯಿಂದ ಸಾಹಿತ್ಯ ಗಾನ ನೃತ್ಯ ವೈಭವ ಕಾರ್ಯಕ್ರಮ ನಡೆಯಲಿರುವುದು.
ಡಾ. ವಾಣಿಶ್ರೀ ಕಾಸರಗೋಡು ಅವರು ಸಾಹಿತ್ಯ ಪ್ರಸ್ತುತಿ ಸಹಿತ ಕಾರ್ಯಕ್ರಮದ ಸಮಗ್ರ ನಿರೂಪಣೆ ಮಾಡುವರು. ಸಂಸ್ಥೆಯ ಅಪ್ರತಿಮ ಕಲಾವಿದರಾದ ಗುರುರಾಜ್ ಕಾಸರಗೋಡು, ಜ್ಞಾನ ರೈ ಪುತ್ತೂರು, ವರ್ಷಾ ಶೆಟ್ಟಿ, ಆಜ್ಞಾ ರೈ ಪುತ್ತೂರು, ನವ್ಯಶ್ರೀ ಕುಲಾಲ್, ದಿಯಾ ಸುಕೇಶ್ ಗಟ್ಟಿ, ಉಷಾ ಸುಧಾಕರನ್, ಸುಮಿತ್ರಾ, ಮಧುಲತಾ ಮನೋಜ್, ಶ್ರೀರಕ್ಷಾ ಸರ್ಪಂಗಳ, ಹರೀಶ್ ಪಂಜಿಕಲ್ಲು ಮುಂತಾದವರು ವೈವಿಧ್ಯಮಯ ಪ್ರತಿಭೆಯನ್ನು ಪ್ರದರ್ಶಿಸಲು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಗುವರು ಎಂದು ಸಂಸ್ಥೆಯ ಕಾರ್ಯದರ್ಶಿಯವರಾದ ಗುರುರಾಜ್ ಕಾಸರಗೋಡು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ