ಜೀವನಾಸಕ್ತಿ ಬದುಕಿನ ಕೊನೆಯವರೆಗೂ ಇರಲಿ: ಡಾ.ನಿರಂಜನ ವಾನಳ್ಳಿ

Upayuktha
0



ಉಜಿರೆ : ನೋಡುವ ದೃಷ್ಟಿಕೋನ ಭಿನ್ನವಾಗಿದ್ದರೆ, ಕೇಳುವ ಮನಸ್ಸಿದ್ದರೆ ಕ್ರಿಯಾತ್ಮಕ ಬರವಣಿಗೆಗಳನ್ನು ಕಟ್ಟಿಕೊಡಲು ಸಾಧ್ಯ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಕುಲಪತಿ ಡಾ.ನಿರಂಜನ ವಾನಳ್ಳಿ ಹೇಳಿದರು.

    


ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಬರವಣಿಗೆಯ ಕೌಶಲ್ಯದ ಜೊತೆಗೆ ತಂತ್ರಜ್ಞಾನದ ಅರಿವು ಅಗತ್ಯವಿದೆ. ಪರಿಶ್ರಮದ ಮೇರೆಗೆ ಅವಕಾಶಗಳ ಬಾಗಿಲು ತೆರೆಯುತ್ತದೆ. ಕ್ಷಣ ಕ್ಷಣವು ವಿನೂತನವಾಗಿ ಪ್ರಯತ್ನಶೀಲರಾದಾಗ ವಿದ್ಯಾರ್ಥಿ ಜೀವನ ಸಾರ್ಥಕವಾಗುತ್ತದೆ ಎಂದು ತಮ್ಮ ಜೀವನಾನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.



ನವ ಮಾಧ್ಯಮದ ಪ್ರಾವೀಣ್ಯತೆ ಮತ್ತು ಸವಾಲುಗಳು, ಮಾಧ್ಯಮ ಕ್ಷೇತ್ರದಲ್ಲಿನ ಉದ್ಯೋಗ ಅವಕಾಶಗಳು, ತಂತ್ರಜ್ಞಾನದ ಒಳಿತು ಮತ್ತು ಕೆಡಕುಗಳು ಇತ್ಯಾದಿ ವಿದ್ಯಾರ್ಥಿಗಳ ಪ್ರಶ್ನೆಗಳನ್ನು ಸಂವಾದದಲ್ಲಿ ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ಮಾರ್ಚ್ 1 ಮತ್ತು 2 ರಂದು ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ನಡೆಯಲಿರುವ 'ರಾಷ್ಟ್ರೀಯ ವಿಚಾರ ಸಂಕೀರ್ಣದ ಮಾಹಿತಿ ಪತ್ರಿಕೆಯನ್ನು ಡಾ.ನಿರಂಜನ ವಾನಳ್ಳಿಯವರು ಬಿಡುಗಡೆಗೊಳಿಸಿದರು.



ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಭಾಸ್ಕರ್ ಹೆಗ್ಗಡೆ ಸ್ವಾಗತಿಸಿ , ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉದಯವಾಣಿಯ ವರದಿಗಾರರಾಗಿದ್ದ ಅಶೋಕ್ ಪಿ.ಎಸ್ ಭಾಗಿಯಾಗಿದ್ದರು. ವಿಧ್ಯಾರ್ಥಿನಿ ಸುಚೇತಾ ವಂದಿಸಿದರು. ಈ ಸಂದರ್ಭದಲ್ಲಿ ವಿಭಾಗದ ವಿದ್ಯಾರ್ಥಿಗಳು ಹಾಗು ಉಪನ್ಯಾಸಕರು ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top