ಮಂಗಳೂರು : ಹಿಂದೂ ಸಮಾಜದ ಮಾರ್ಗದರ್ಶಕರಾಗಿರುವ ಡಾ.ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ದುರುದ್ದೇಶ ಪೂರ್ವಕವಾಗಿ ಕೇಸು ದಾಖಲಿಸಿರುವುದು ಖಂಡನೀಯ. ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಮುಂದುವರಿದಿದ್ದು ಇದರ ವಿರುದ್ಧ ಹೋರಾಟ ಅನಿವಾರ್ಯವಾಗಿದೆ ಎಂದು ದ.ಕ.ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ.
ಮುಸ್ಲಿಂ ಸಮಾಜದ ಮಹಿಳೆಯರಿಗೆ ಆದ ಅನ್ಯಾಯ ಹಾಗೂ ಮೋದಿ ಸರ್ಕಾರ ತ್ರಿವಳಿ ತಲಾಕ್ ನಿಷೇಧ ಮಾಡಿದ ಬಗ್ಗೆ ಡಾ,ಭಟ್ ಅವರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರು. ಇದೇ ಹೇಳಿಕೆಯನ್ನು ತಿರುಚಿ ಅಲ್ಪಸಂಖ್ಯಾತರನ್ನು ಓಲೈಸುವ ಉದ್ದೇಶದಿಂದ ಕೇಸು ದಾಖಲಿಸಲಾಗಿದೆ. ಸಿದ್ದರಾಮಯ್ಯ ಸರ್ಕಾರದ ಈ ಷಡ್ಯಂತ್ರವನ್ನು ಸಹಿಸಲು ಸಾಧ್ಯವಿಲ್ಲ. ಡಾ.ಪ್ರಭಾಕರ ಭಟ್ ವಿರುದ್ದ ಹಾಕಿರುವ ಸುಳ್ಳು ಕೇಸನ್ನು ತಕ್ಷಣ ವಾಪಸು ಪಡೆಯಬೇಕೆಂದು ಸಂಸದರು ಆಗ್ರಹಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ