ಕೊಚ್ಚಿನ್– ಮಂಗಳೂರು ಹೊಸ ವಂದೇ ಭಾರತ್ ರೈಲಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಮನವಿ

Upayuktha
0

ತಿರುವನಂತಪುರ- ಕಾಸರಗೋಡು ವಂದೇ ಭಾರತ್ ರೈಲು ಮಂಗಳೂರಿಗೆ ವಿಸ್ತರಿಸಲು ಕೋರಿಕೆ




ಮಂಗಳೂರು: ತಿರುವನಂತಪುರ-ಕಾಸರಗೋಡು ನಡುವೆ ಓಡುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರು ತನಕ ವಿಸ್ತರಿಸುವಂತೆ ಹಾಗೂ ಮಂಗಳೂರಿನಿಂದ ಕೊಚ್ಚಿನ್‌ಗೆ ಇನ್ನೊಂದು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ನೀಡುವಂತೆ ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ರವರಿಗೆ ಮನವಿ ಸಲ್ಲಿಸಿದ್ದಾರೆ.


ಮಂಗಳೂರು ನಗರವು ಕರ್ನಾಟಕದ ದಕ್ಷಿಣ ಭಾಗದ ಒಂದು ಪ್ರಮುಖ ಬಂದರು ಮತ್ತು ವಾಣಿಜ್ಯ ನಗರವಾಗಿದ್ದು, ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆಯನ್ನು ಮಂಗಳೂರಿಗೆ ವಿಸ್ತರಿಸುವುದರಿಂದ ಕೇರಳ ಮತ್ತು ಕರ್ನಾಟಕದ ನಡುವಿನ ಆರ್ಥಿಕ ಚಟುವಟಿಕೆಗಳಿಗೆ, ಪ್ರವಾಸೋದ್ಯಮಕ್ಕೆ ಅನುಕೂಲವಾಗಲಿದೆ. ಸುಖಕರ ಪ್ರಯಾಣ ಹಾಗೂ ಅತೀ ವೇಗಕ್ಕೆ ಹೆಸರಾಗಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲ್‌ನಿಂದ ಪ್ರಯಾಣ ಅವಧಿ ಕಡಿಮೆಯಾಗಲಿದೆ.


ವಂದೇ ಭಾರತ್ ರೈಲಿಗೆ ಹೆಚ್ಚಿನ ಬೇಡಿಕೆ ಇದ್ದು ಈ ಕುರಿತು ಅಗತ್ಯ ಕ್ರಮಕೈಗೊಂಡು ತಿರುವನಂತಪುರ - ಮಂಗಳೂರಿಗೆ ಹಾಗೂ ಕೊಚ್ಚಿನ್ –ಮಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಒದಗಿಸುವಂತೆ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top