ಡಿ.16: ಮಜಿ ವೀರಕಂಭ ಶಾಲಾ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ

Upayuktha
0


ಬಂಟ್ವಾಳ: ತಾಲೂಕಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿನ ಶಾಲಾ ವಾರ್ಷಿಕೋತ್ಸವ ಹಾಗೂ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಡಿ.16ನೇ ಶನಿವಾರ ನಡೆಯಲಿರುವುದು.


ಸಾಯಂಕಾಲ ಘಂಟೆ 4 ರಿಂದ ಸ್ಥಳೀಯ ಅಂಗನವಾಡಿ ಪುಟಾಣಿಗಳಿಂದ, ಶಾಲಾ ವಿದ್ಯಾರ್ಥಿಗಳಿಂದ, ಹಿರಿಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ "ಹೆಜ್ಜೆ ಗೆಜ್ಜೆ ನಿನಾದ" ನಡೆಯಲಿರುವುದು.


ಸಾಯಂಕಾಲ 6:00 ಗಂಟೆಗೆ  ಸರಿಯಾಗಿ ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು ಈ ಸಂದರ್ಭದಲ್ಲಿ ದಾನಿಗಳಿಂದ ಕೊಡುಗೆಯಾಗಿ ನೀಡಿದ ಕೊಡುಗೆಗಳನ್ನು ಶಾಲೆಗೆ ಹಸ್ತಾಂತರಿಸಲಾಗುವುದು. ಈ ಕಾರ್ಯಕ್ರಮದಲ್ಲಿ ವೀರಕಂಬ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಲಿತಾ, ಉಪಾಧ್ಯಕ್ಷ ಜನಾರ್ದನ ಪೂಜಾರಿ, ಸದಸ್ಯರಾದ ದಿನೇಶ್, ನಿಶಾಂತ್ ರೈ, ಜಯಂತಿ, ಗೀತಾ ಜೆ, ಗಾಂಭೀರ್, ಲಕ್ಷ್ಮಿ, ಮೀನಾಕ್ಷಿ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ, ಕ್ಷೇತ್ರ ಸಮನ್ವಯ ಅಧಿಕಾರಿ ರಾಘವೇಂದ್ರ ಬಲ್ಲಾಳ್‌, ಶಾಲಾ ದತ್ತು ಸಂಸ್ಥೆಯ ಮುಖ್ಯಸ್ಥರಾದ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು, ಟಾಟಾ ಕಂಪನಿಯ ಆಡಳಿತ ವಿಭಾಗದ ಉಪಾಧ್ಯಕ್ಷರಾದ ಸುಧೀರ್ ಸಾಗರ್, ಶಾಲಾ ಸ್ಥಳದಾನಿಗಳಾದ ಎಂ ತಿರುಮಲ ಕುಮಾರ್, ಕಲ್ಲಡ್ಕ ಕ್ಲಸ್ಟರ್ ಸಿ.ಆರ್.ಪಿ ಜ್ಯೋತಿ ಡಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ್ ಗೌಡ, ಮೊದಲಾದವರು ಉಪಸ್ಥಿತರಿರುವರು.


ಸಭಾ ಕಾರ್ಯಕ್ರಮದ ಬಳಿಕ ಸಂಸ್ಕೃತಿಕ ಕಾರ್ಯಕ್ರಮ ಮುಂದುವರೆಯಲಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೊರಗಪ್ಪ ನಾಯ್ಕ್ ತಿಳಿಸಿರುತ್ತಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top