ವಿದ್ಯಾಗಿರಿ: ಜೈಪುರದ ಸುರೇಶ್ ಗ್ಯಾನ್ ವಿಹಾರ್ ವಿಶ್ವವಿದ್ಯಾಲಯದಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಲ್ಲಕಂಬ ಪಂದ್ಯಾವಳಿಯಲ್ಲಿ ಮಂಗಳೂರು ವಿವಿಯ ಮಹಿಳಾ ತಂಡ 5ನೇ ಸ್ಥಾನ ಹಾಗೂ ಪುರುಷರ ತಂಡವು 6ನೇ ಸ್ಥಾನ ಪಡೆದಿದ್ದು, ಖೇಲೊ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ.
ಮಂಗಳೂರು ವಿವಿಯನ್ನು ಪ್ರತಿನಿಧಿಸಿದ್ದ 12 ಜನರ ಪುರುಷರ ಹಾಗೂ ಮಹಿಳೆಯರ ತಂಡದ ಎಲ್ಲಾ ಸದಸ್ಯರು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಗೌವಾಹಟಿಯಲ್ಲಿ ನಡೆಯಲಿರುವ ಖೇಲೊ ಇಂಡಿಯಾ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಕರ್ನಾಟಕದಿಂದ ಆಯ್ಕೆಯಾದ ಎರಡು ವಿವಿಗಳಲ್ಲಿ ಮಂಗಳೂರು ವಿವಿಯು ಒಂದು. ವೈಯಕ್ತಿಕ ನೇತಾಡುವ ಮಲ್ಲಕಂಬ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ದೀಪಕ್ ಗೌಳಿ ಕಂಚಿನ ಪದಕ ಪಡೆದಿದ್ದಾರೆ. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ